Home ಮಾಹಿತಿಕುಮಟಾ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ.

ಕುಮಟಾ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ.

by News Desk
0 comments

ಕಾರವಾರ : ನಿನ್ನೆ ಬೆಳಿಗ್ಗೆಯಿಂದ ತುಸು ಬಿಡುವು ನೀಡಿದ್ದ ಮಳೆ ರಾತ್ರಿಯಿಂದ ವ್ಯಾಪಕವಾಗಿ ಸುರಿಯುತ್ತಿದೆ ಆರೆಂಜ್ ಅಲರ್ಟ ಘೋಷಣೆ ಮಾಡಲಾಗಿತ್ತಾದರೂ ಇದೀಗ ಎಲ್ಲೆಡೆ ಪ್ರವಾಹದ ಭೀತಿ ಎದುರಾಗಿದೆ.

ಮಳೆ ಹಿನ್ನಲೆಯಲ್ಲಿ ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಅಲ್ಲಿನ ಬಿಇಓ ಆದೇಶ ಹೊರಡಿಸಿದ್ದಾರೆ. ಕುಮಟಾದಲ್ಲಿ ಇದೀಗ ರಜೆ ಘೋಷಣೆ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ರಜೆ ಸಂದೇಶ ನೀಡಿದ್ದಾರೆ.

ಮಳೆಯ ಪ್ರಮಾಣ ಜಾಸ್ತಿಯಿರುವುದರಿಂದ ಕುಮಟಾ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆ ಗಳಿಗೆ ಇಂದು ದಿನಾಂಕ 29/08/2025 ರಂದು ರಜೆ ಘೋಷಿಸಲಾಗಿದೆ. ತರಗತಿಗಳನ್ನೂ ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಲು ತಿಳಿಸಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ತಹಶಿಲ್ದಾರ ಸಂದೇಶ ರವಾನಿಸಿ – ಕುಮಟಾ ತಾಲೂಕಿನಲ್ಲಿ ಹೆಚ್ಚಿನ ಮಳೆ ಆಗುತ್ತಿರುವುದರಿಂದ ಶಾಲಾ ಮಕ್ಕಳ ಸುರಕ್ಷತಾ ದ್ರಷ್ಟಿಯಿಂದ ಅಂಗನವಾಡಿ. ಪ್ರಾಥಮಿಕ. ಹೈಸ್ಕೂಲ್ ಹಾಗೂ ಪದವಿ ಪೂರ್ವ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಜಿಲ್ಲೆಯ ಕರಾವಳಿ ಸೇರಿದಂತೆ ಬಹುತೇಕ ಭಾಗದಲ್ಲಿ ರಾತ್ರಿಯಿಂದ ಎಡಬಿಡದೆ ವರುಣ ಅಬ್ಬರಿಸುತ್ತಿದ್ದಾನೆ. ಭಾರಿ ಮಳೆಗೆ ವಾಹನ ಸವಾರರು ಕೂಡ ಸಂಚರಿಸಲು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".