Home ಜಿಲ್ಲೆಹೊನ್ನಾವರ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಹೊನ್ನಾವರ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ತೀವ್ರ ಮಳೆಯ ಹಿನ್ನೆಲೆಯಲ್ಲಿ ತಹಶೀಲ್ದಾರರ ಆದೇಶ : ನಾಳೆಯೂ ಶಾಲೆಗೆ ರಜೆ.

by News Desk
0 comments

 

ಹೊನ್ನಾವರ : ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಗೇರುಸೊಪ್ಪಾ ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರಬಿಟ್ಟಿರುವುದರಿಂದ, ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಹೊನ್ನಾವರ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ/ಪ್ರೌಢ ಶಾಲೆಗಳ ಮಕ್ಕಳಿಗೆ ನಾಳೆ (ಅ.೩೦) ರಜೆ ಘೋಷಿಸಿ ತಹಶಿಲ್ದಾರ ಅವರು ಆದೇಶ ಹೊರಡಿಸಿದ್ದಾರೆ.

ಹವಾಮಾನ ಮುನ್ಸೂಚನೆ ಇಲ್ಲದೇ, ಅನಿರೀಕ್ಷಿತ ಭಾರಿ ಮಳೆಯಾದ ಸಂದರ್ಭದಲ್ಲಿ ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ರಜೆ ಘೋಷಿಸುವ ಹಾಗೂ ತುರ್ತು ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ತಾಲೂಕಿನ ತಹಶೀಲ್ದಾರರಿಗೆ ಪ್ರತ್ಯಾಯೋಜನೆ ಮಾಡಿದ ಹಿನ್ನೆಲೆಯಲ್ಲಿ ಹೊನ್ನಾವರ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಗೇರುಸೊಪ್ಪಾ ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರಬಿಟ್ಟಿರುವುದರಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹೊನ್ನಾವರ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಹೊನ್ನಾವರ ರವರ ಮೌಖಿಕ ಕೋರಿಕೆಯಂತೆ ಮತ್ತು ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಹೊನ್ನಾವರ ತಾಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಅಂಗನವಾಡಿ, ಪ್ರಾಥಮಿಕ/ಪ್ರೌಢ ಶಾಲೆಗಳ ಮಕ್ಕಳಿಗೆ ಅನಾನುಕೂಲವಾಗದಂತೆ ಹಾಗೂ ಅವಘಡಗಳು ಸಂಭವಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಂಗನವಾಡಿ, ಪ್ರಾಥಮಿಕ/ಪ್ರೌಢ ಶಾಲೆಗಳಿಗೆ ದಿನಾಂಕ:30-08-2025 ರಂದು ಮಾತ್ರ ರಜೆ ಘೋಷಿಸುವ ಬಗ್ಗೆ ಆದೇಶ ಮಾಡಿದ್ದಾರೆ‌.

ಆದೇಶ ಇಂತಿದೆ.

ಹೊನ್ನಾವರ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ/ಪ್ರೌಢ ಶಾಲೆಗಳ ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ದಿನಾಂಕ:30-08-2025 ರಂದು ರಜೆ ಘೋಷಿಸಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಹೊನ್ನಾವರ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಹೊನ್ನಾವರ ರವರು ಕಾರ್ಯ ರೂಪಕ್ಕೆ ತರುವುದು ಮತ್ತು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು ಎಂದು ಸೂಚಿಸಲಾಗಿದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".