Home ಮಾಹಿತಿಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಕಾರಣ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಕಾರಣ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಸಾಧ್ಯತೆ

ಸೆಪ್ಟಂಬರ್ ಏಳರವರೆಗೆ ಹೆಚ್ಚಿನ ಮಳೆಯಾಗಲಿದೆ.ಇಂದು ಆರೆಂಜ್ ಅಲರ್ಟ ನೀಡಲಾಗಿದ್ದು , ನಾಲ್ಕು ದಿನ ಯಲ್ಲೋ ಅಲರ್ಟ ಇರಲಿದೆ.

by News Desk
0 comments

ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಮಳೆ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಕಾರಣ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆಪ್ಟಂಬರ್ ಏಳರವರೆಗೆ ಹೆಚ್ಚಿನ ಮಳೆಯಾಗಲಿದೆ.ಇಂದು ಆರೆಂಜ್ ಅಲರ್ಟ ನೀಡಲಾಗಿದ್ದು , ನಾಲ್ಕು ದಿನ ಯಲ್ಲೋ ಅಲರ್ಟ ಇರಲಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 3ರವರೆಗೂ ಸಾಧಾರಣ ಮಳೆ ಆಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

03.09.2025ರ ಬೆಳಿಗ್ಗೆ 8 ಗಂಟೆವರೆಗಿನ೮ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಸಿಲು, ಮೋಡ ಹಾಗೂ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಳೆ ಬಿಡುವಿನ ಅಂತರ ಸ್ವಲ್ಪ ಕಡಿಮೆ ಇರಬಹುದು.

ಈಗಿನಂತೆ ಭಾರಿ ಮಳೆಯ ಸಾಧ್ಯತೆಗಳು ಕ್ಷೀಣಿಸುತ್ತಿದ್ದು, ಬಿಟ್ಟು ಬಿಟ್ಟು ಸಾಮಾನ್ಯ ಮಳೆಯು ಸೆಪ್ಟೆಂಬರ್ 7ರ ತನಕ ಮುಂದುವರಿಯುವ ಮುನ್ಸೂಚೆನೆ ಇದೆ. ನಂತರ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಮಲೆನಾಡು ಭಾಗಗಳಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಸೆಪ್ಟೆಂಬರ್ 7ರ ತನಕ ಬಿಸಿಲಿನೊಂದಿಗೆ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು.

ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ
ಇದೆ. ದಾವಣಗೆರೆ, ವಿಜಯನಗರ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಸೆಪ್ಟೆಂಬರ್ 3ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿಗೆ ತಲುಪಿರುವ ವಾಯುಭಾರ ಕುಸಿತವು ಅಲ್ಲೇ ಶಿಥಿಲಗೊಳ್ಳುವ ಲಕ್ಷಣವಿರುವುದರಿಂದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಭಾರಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸೂಚನೆಗಳಿವೆ.
ಮುಂಗಾರು ದುರ್ಬಲತೆ ಮುಂದುವರಿಯಲಿದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".