Home ಜಿಲ್ಲೆಭೀಕರವಾಗಿ ನಡೆದ ಕಾರು ಅಪಘಾತ – ಓರ್ವ ಸಾವು

ಭೀಕರವಾಗಿ ನಡೆದ ಕಾರು ಅಪಘಾತ – ಓರ್ವ ಸಾವು

ಕಾರವಾರದಲ್ಲಿ ನಡೆದ ಘಟನೆ - ಪ್ರಕರಣ ದಾಖಲು

by News Desk
0 comments

ಕಾರವಾರ : ಗೋವಾಕಡೆಯಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ಅಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ, ನಗರದ ಹೆದ್ದಾರಿಯಲ್ಲಿರುವ ಸುರಂಗ ಮಾರ್ಗದಲ್ಲಿ ತಡರಾತ್ರಿ ನಡೆದಿದೆ.

ಚಾಲಕ ಎದುರಿಗೆ ಇದ್ದ ಇನ್ನೊಂದು ವಾಹನವನ್ನು ಓವರ್ ಟೆಕ್ ಮಾಡಲು ಪ್ರಯತ್ನಿಸಿದ್ದ ಎನ್ನಲಾಗಿದ್ದು, ಈ ವೇಳೆ ಅಪಘಾತವಾಗಿದ್ದು, ಈ ದುರಂತದಲ್ಲಿ ಕಾರು ಚಲಾಯಿಸುತ್ತಿದ್ದ ಪುತ್ತೂರು ಮೂಲದ ರಂಜಿತ್ ವಿಶ್ವನಾಥ ನಾಯ್ಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತ ವ್ಯಕ್ತಿ ಗೋವಾ ಕಡೆಯಿಂದ ಪುತ್ತೂರಿನತ್ತ ಪ್ರಯಾಣಿಸುತ್ತಿದ್ದ. ಅಪಘಾತ ತಡರಾತ್ರಿ ಸುಮಾರು 2.30ರ ಸಮಯದಲ್ಲಿ ಕಾರವಾರ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".