Home ಮಾಹಿತಿಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

by News Desk
0 comments

ಉತ್ತರ ಕನ್ನಡ ಜಿಲ್ಲಾ ಭಂಡಾರಿ ಸಮಾಜೋನ್ನತಿ ಸಂಘ (ರಿ. ) ಕಾರವಾರ ಇವರು 2023-24 ಮತ್ತು 2024 -25 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪುರಸ್ಕಾರ ( ಶಿಷ್ಯವೇತನ) ಕಾರ್ಯಕ್ರಮವನ್ನು ಅಕ್ಟೋಬರ್ ತಿಂಗಳಲ್ಲಿ ಕುಮಟಾದಲ್ಲಿ ಹಮ್ಮಿಕೊಂಡಿದ್ದು, ಪ್ರಸಕ್ತ ಶೈಕ್ಷಣಿಕ ಎರಡೂ ಸಾಲಿನಲ್ಲಿ ಎರಡೂ ವಿಭಾಗದಲ್ಲಿ ಶೇಕಡಾ 90 ಮತ್ತು ಅದಕ್ಕಿಂತ ಮೇಲ್ಪಟ್ಟು ಸಾಧನೆಗೈದು ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಸ್ವಂತ ಕೈಬರಹದ ಅರ್ಜಿಯನ್ನು ಬರೆದು ದೃಢೀಕೃತ ಅಂಕಪಟ್ಟಿಯೊಂದಿಗೆ ತಮ್ಮ ಸಂಪರ್ಕದ ದೂರವಾಣಿ ಸಂಖ್ಯೆಯನ್ನು ನಮೂದಿಸಿ ಅರ್ಜಿಯನ್ನು ಸಲ್ಲಿಸಲು ಕೋರಿದೆ. ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯ ವಿದ್ಯಾರ್ಥಿಗಳು ಆಯಾ ತಾಲೂಕಿನ ಭಂಡಾರಿ ಸಮಾಜೋನ್ನತಿ ಸಂಘದ ಅಧ್ಯಕ್ಷರು/ ಕಾರ್ಯದರ್ಶಿ ಅವರಿಗೆ ಅರ್ಜಿಯನ್ನು ನೇರವಾಗಿ ಸಲ್ಲಿಸಬಹುದು. ಎಂದು ಜಿಲ್ಲಾ ಅಧ್ಯಕ್ಷರಾದ ಅರುಣ ಸಿ. ಮಣಕೀಕರ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಅರ್ಜಿ ಸಲ್ಲಿಸಲು 30 ಸೆಪ್ಟೆಂಬರ್ 2025 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9340039285 ಅಥವಾ 9480086038 ಸಂಪರ್ಕಿಸಲು ಕೋರಲಾಗಿದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".