1.3K
ಕುಮಟಾ : ಚಿತ್ರಗಿ ಮಹಾತ್ಮಾ ಗಾಂಧಿ ಪ್ರೌಢ ಶಾಲೆಯ ಮುಖ್ಯಾಧ್ಯಾಪಕ ಪಾಂಡುರಂಗ ಸುಬ್ರಾಯ ವಾಗ್ರೇಕರ ರವರು ಕೆಪಿಸಿಸಿ ವತಿಯಿಂದ ಶಿಕ್ಷಕರಿಗೆ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ್ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಪ್ಟೆಂಬರ್ 5 ರಂದು ಬೆಂಗಳೂರಿನಲ್ಲಿ ನಡೆಯುವ ಈ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಗೌರವವನ್ನು ಸ್ವೀಕರಿಸಲಿದ್ದಾರೆ.
ಶೈಕ್ಷಣಿಕ ಚಟುವಟಿಕೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸುವಿಕೆ, ಸೇವಾ ಅವಧಿಯಲ್ಲಿ ಮಾಡಿದ ಸಾಧನೆಗಳು, ಸಾಮಾಜಿಕ ಕಳಕಳಿಯ ಕಾರ್ಯಗಳು, ಭಾಗವಹಿಸಿದ ತರಬೇತಿ, ಶಿಕ್ಷಣ ಸಂಸ್ಥೆಗಾಗಿ ಹಾಗೂ ವಿದ್ಯಾರ್ಥಿಗಳಿಗಾಗಿ ಕೈಗೊಂಡ ವಿವಿಧ ಯೋಜನೆಗಳನ್ನು ಆದರಿಸಿ ಈ ಬಹುಮಾನವನ್ನು ನೀಡಲಾಗುತ್ತದೆ. ಇವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಈ ಹಿಂದೆ ಲಭಿಸಿತ್ತು.
