ಕುಮಟಾ : ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು 2025-26 ನೇ ಸಾಲಿನ ಉತ್ತರ ಕನ್ನಡ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿವಿಧ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವುದರೊಂದಿಗೆ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಯೋಗದಲ್ಲಿ ಪಾವನಿ, ಇಂಚರಾ ಹಾಗೂ ಅಪೇಕ್ಷಾ ಪ್ರಥಮ ಸ್ಥಾನ, ಚೆಸ್ ನಲ್ಲಿ ಶಮಿತಾ ಪ್ರಥಮ ಸ್ಥಾನ, ಕರಾಟೆಯಲ್ಲಿ ಪ್ರಥ್ವಿನ್ ಪ್ರಥಮ ಸ್ಥಾನ, ಚಕ್ರ ಎಸೆತದಲ್ಲಿ ಎಚ್. ಡಿ. ನಿರಂಜನ ದ್ವಿತೀಯ ಸ್ಥಾನ, ಬಾಲಕಿಯರ 4 × 100ಮೀ. ರೀಲೆ ದ್ವಿತೀಯ ಸ್ಥಾನ, ಬಾಲಕಿಯರ ಥ್ರೋಬಾಲ್ ದ್ವಿತೀಯ ಸ್ಥಾನ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನಗಳಿಸುವುದರೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕೊಂಕಣ ಎಜುಕೇಶನ್ ಟ್ರಸ್ಟ್ ನ ಪದಾಧಿಕಾರಿಗಳು, ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕ ಗುರುರಾಜ ಶೆಟ್ಟಿ, ಪ್ರಾಚಾರ್ಯ ಕಿರಣ ಭಟ್ಟ, ಉಪಪ್ರಾಚಾರ್ಯೆ ಸುಜಾತಾ ಹೆಗಡೆ, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಶುಭಕೋರಿದ್ದಾರೆ.