Home ಜಿಲ್ಲೆಸಾಧಕಿ‌ ದಿವ್ಯಾ ಗೌಡರಿಗೆ ರಾಜ್ಯಪಾಲರಿಂದ ಚಿನ್ನದ ಪದಕ

ಸಾಧಕಿ‌ ದಿವ್ಯಾ ಗೌಡರಿಗೆ ರಾಜ್ಯಪಾಲರಿಂದ ಚಿನ್ನದ ಪದಕ

by News Desk
0 comments

ಹೊನ್ನಾವರ : ತಾಲೂಕಿನ ಹಳದೀಪುರದ ಮಣ್ಗಗದ್ದೆಯ ದಿವ್ಯಾ ಜಟ್ಟು ಗೌಡ ಎಂ.ಎಸ್ಸಿ ಫಿಸಿಕ್ಸ್ ನಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ಬಹುದೊಡ್ಡ ಸಾಧನೆ ಮಾಡಿದ್ದಾರೆ.

ಇವರು ಹಳದೀಪುರದ ಜಟ್ಟು ಗಿರಿಯ ಗೌಡ ಹಾಗೂ ನಾಗವೇಣಿ ಜಟ್ಟು ಗೌಡ ಇವರ ಮಗಳಾಗಿದ್ದು, ಹತ್ತನೇ ತರಗತಿಯನ್ನು ಆರ್.ಈ.ಎಸ್ ಸಂಯುಕ್ತ ಪದವಿಪೂರ್ವ ವಿದ್ಯಾಲಯದಲ್ಲಿ ಮುಗಿಸಿ, ಪಿ.ಯು.ಸಿ ಶಿಕ್ಷಣವನ್ನು ನೆಲ್ಲಿಕೇರಿ ಕಾಲೇಜಿನಲ್ಲಿ ಹಾಗೂ ಪದವಿಯನ್ನು ಕುಮಟಾದ ಬಾಳಿಗಾ ಕಾಲೇಜಿನಲ್ಲಿ ಮುಗಿಸಿ, ಹೆಚ್ಚಿನ ವ್ಯಾಸಂಗಕ್ಕಾಗಿ, ಬೆಂಗಳೂರಿನ ಮಹಾರಾಣಿ ಕಾಲೇಜಿಗೆ ತೆರಳಿದ್ದರು‌. ಅವರು ಎಂ.ಎಸ್ಸಿ ಫಿಸಿಕ್ಸ್ ನಲ್ಲಿ ಕಾಲೇಜಿಗೆ ಟಾಪರ್ ಆಗುವ ಮೂಲಕ ಸಾಧನೆ ಮಾಡಿದ್ದಾರೆ.

ಶುಕ್ರವಾರ ನಡೆದ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ ಬೆಂಗಳೂರು ಎರಡನೇ ಮತ್ತು ಮೂರನೇ ವಾರ್ಷಿಕ ಘಟಿಕೋತ್ಸವ 2025 ಈ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು ಚಿನ್ನದ ಪದಕ ನೀಡಿ ಗೌರವಿಸಿದರು. ಪ್ರಸ್ತುತ ದಿವ್ಯಾ ಅವರು ಎಂ.ಎಸ್ ರಾಮಯ್ಯ ಕಾಲೇಜಿನಲ್ಲಿ ಫಿಸಿಕ್ಸ್ ವಿಭಾಗದಲ್ಲಿ ಪಿ.ಎಚ್.ಡಿ ಮಾಡುತ್ತಿರುವುದು ವಿಶೇಷ.

ದಿವ್ಯಾ ಅವರ ಸಾಧನೆಗೆ ಹಳದೀಪುರ ಗ್ರಾ.ಪಂ ಉಪಾಧ್ಯಕ್ಷ ಅಜಿತ್ ನಾಯ್ಕ ಹಾಗೂ ಗ್ರಾಮಸ್ಥರು, ಕುಟುಂಬದ ಸದಸ್ಯರು ಅಭಿನಂದಿಸಿದ್ದಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".