Home ಜಿಲ್ಲೆಹೊನ್ನಾವರಕ್ಕೆ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿ

ಹೊನ್ನಾವರಕ್ಕೆ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿ

ವಿದ್ಯಾರ್ಥಿ ಸಾವು, 26ಕ್ಕೂ ಹೆಚ್ಚು ಮಂದಿಗೆ ಗಾಯ

by News Desk
0 comments

ಹೊನ್ನಾವರ: ಮೈಸೂರಿನಿಂದ ಪ್ರವಾಸಕ್ಕೆಂದು ಹೊನ್ನಾವರಕ್ಕೆ ಬರುತ್ತಿದ್ದ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು, 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ದಾರುಣ ಘಟನೆ ತಾಲೂಕಿನ ಸುಳೆ ಮುರ್ಕಿ ಕ್ರಾಸ್ ಬಳಿ ನಡೆದಿದೆ.

​ಮೃತ ದುರ್ದೈವಿ ವಿದ್ಯಾರ್ಥಿಯನ್ನು ಮೈಸೂರಿನ ತರಳಬಾಳು ವಿದ್ಯಾ ಸಂಸ್ಥೆಯ ಪವನ್ (15) ಎಂದು ಗುರುತಿಸಲಾಗಿದ್ದು, ಈತ 10ನೇ ತರಗತಿ (SSLC) ಓದುತ್ತಿದ್ದನು.

ಮೈಸೂರಿನ ತರಳಬಾಳು ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಶಾಲಾ ಬಸ್ ಮೂಲಕ ಪ್ರವಾಸಕ್ಕಾಗಿ ಹೊನ್ನಾವರಕ್ಕೆ ಆಗಮಿಸುತ್ತಿದ್ದರು. ಹೊನ್ನಾವರದ ಸುಳೆ ಮುರ್ಕಿ ಕ್ರಾಸ್ ಬಳಿ ಬರುತ್ತಿದ್ದಂತೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ.

​ಘಟನೆಯಲ್ಲಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".