Home ಅಪರಾಧಗೋಕರ್ಣಕ್ಕೆ ಬರುತ್ತಿದ್ದ ಬಸ್ ಗೆ ಬೆಂಕಿ – ಸಜೀವ ದಹನವಾದ ಪ್ರಯಾಣಿಕರು.

ಗೋಕರ್ಣಕ್ಕೆ ಬರುತ್ತಿದ್ದ ಬಸ್ ಗೆ ಬೆಂಕಿ – ಸಜೀವ ದಹನವಾದ ಪ್ರಯಾಣಿಕರು.

ಭೀಕರ ಅಪವಘಡಕ್ಕೆ ನಲುಗಿದ ಜನತೆ - ಕುಟುಂಬದ ಆಕ್ರಂದನ

by News Desk
0 comments

ಚಿತ್ರದುರ್ಗ : ಜಿಲ್ಲೆಯಲ್ಲಿ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತವೊಂದು ಜನರನ್ನು ಬೆಚ್ಚಿ ಬೀಳಿಸಿದೆ. ಗುರುವಾರ ಮುಂಜಾನೆ ಸಂಭವಿಸಿದ ಈ ಅಪಘಾತದಲ್ಲಿ ಕನಿಷ್ಠ 17 ಜನರು ಸಜೀವ ದಹನವಾಗಿರುವ ವರದಿಯಿದೆ. ಬೆಂಗಳೂರಿನಿಂದ ಗೋಕರ್ಣದತ್ತ ಪ್ರಯಾಣಿಸುತ್ತಿದ್ದ ಸೀಬರ್ಡ್ ಸಂಸ್ಥೆಯ ಖಾಸಗಿ ಸ್ಲೀಪರ್ ಕೋಚ್ ಬಸ್ ಗೆ ರಾಷ್ಟ್ರೀಯ ಹೆದ್ದಾರಿ–48ರ ಚಿತ್ರದುರ್ಗ ಸಮೀಪ ಎದುರಿನಿಂದ ಬಂದ ಲಾರಿಗೆ ಡಿಕ್ಕಿ ಹೊಡೆದು, ಕ್ಷಣಾರ್ಧದಲ್ಲಿ ಬೆಂಕಿಗಾಹುತಿಯಾಗಿದೆ.

ಮುಗಿಲು ಇನ್ನೂ ತೆರೆದಿರದ ಮುಂಜಾನೆ ಸುಮಾರು 2 ಗಂಟೆ ವೇಳೆಗೆ, ಬಸ್‌ನಲ್ಲಿದ್ದ ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದಾಗಲೇ ಈ ದುರಂತ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯಂತೆ, ಎದುರಿನಿಂದ ಬರುತ್ತಿದ್ದ ಲಾರಿಯೊಂದು ರಸ್ತೆ ವಿಭಜಕವನ್ನು ದಾಟಿ ನೇರವಾಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಬಸ್‌ನಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡು, ಕೆಲವೇ ನಿಮಿಷಗಳಲ್ಲಿ ಸಂಪೂರ್ಣವಾಗಿ ಅಗ್ನಿಗಾಹುತಿಯಾಗಿದೆ.

ಅಪಘಾತ ಸಂಭವಿಸಿದ ಕ್ಷಣದಲ್ಲೇ ಬಸ್ ಚಾಲಕ ಮತ್ತು ನಿರ್ವಾಹಕರು ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಲಾರಿ ಚಾಲಕ ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್‌ನಲ್ಲಿ ಒಟ್ಟು 29 ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಅವರಲ್ಲಿ 14 ಮಹಿಳೆಯರು ಹಾಗೂ 15 ಪುರುಷರು ಇದ್ದರು.

ಭೀಕರ ಅಗ್ನಿದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಹಲವು ಮಂದಿಯನ್ನು ಹಿರಿಯೂರು ಮತ್ತು ತುಮಕೂರು ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಆತಂಕಕಾರಿಯಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ಮತ್ತು ತುರ್ತು ಸೇವಾ ಸಿಬ್ಬಂದಿ ಧಾವಿಸಿ, ಬೆಂಕಿ ನಂದಿಸುವ ಹಾಗೂ ರಕ್ಷಣಾ ಕಾರ್ಯದಲ್ಲಿ ತೊಡಗಿದರು. ಅಪಘಾತದ ನಿಖರ ಕಾರಣ ಪತ್ತೆ ಹಚ್ಚುವ ನಿಟ್ಟಿನಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ಭೀಕರ ದುರಂತವು ಜಿಲ್ಲೆಯಾದ್ಯಂತ ಶೋಕದ ಛಾಯೆ ಆವರಿಸಿದ್ದು, ಮೃತರ ಕುಟುಂಬಗಳಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".