Home ಜಿಲ್ಲೆಬಸ್ ನಲ್ಲಿದ್ದ 9 ಜನರು ಸಜೀವ ದಹನ

ಬಸ್ ನಲ್ಲಿದ್ದ 9 ಜನರು ಸಜೀವ ದಹನ

ಎಂಟು ಶವಗಳು ಪತ್ತೆ - ಮುಂದುವರೆದ ಕಾರ್ಯಾಚರಣೆ

by News Desk
0 comments

ಚಿತ್ರದುರ್ಗ : ಜಿಲ್ಲೆಯ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪೂರ್ವ ವಲಯ ಐಜಿಪಿ ರವಿಕಾಂತೇಗೌಡ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಅಪಘಾತಕ್ಕೀಡಾದ ಬಸ್‌ನೊಳಗಿಂದ ಇದುವರೆಗೆ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಒಟ್ಟು 9ಮಂದಿ ಮೃತಪಟ್ಟಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಸದ್ಯದ ಮಾಹಿತಿಯಂತೆ ಲಾರಿ ಚಾಲಕ ಸೇರಿ ಒಟ್ಟು ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಓರ್ವ ಮಗು ಕೂಡ ಸೇರಿದೆ ಎಂದು ಅವರು ಸ್ಪಷ್ಟಪಡಿಸಿದರು.
ಅಪಘಾತದಲ್ಲಿ ಗಾಯಗೊಂಡಿರುವ ಪ್ರಯಾಣಿಕರನ್ನು ಶಿರಾ ಹಾಗೂ ಹಿರಿಯೂರು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಗಂಭೀರವಾಗಿ ಗಾಯಗೊಂಡ ಕೆಲವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯ ಗಂಭೀರತೆಯನ್ನು ಗಮನಿಸಿ ಬೆಂಗಳೂರಿನಿಂದ DNA ಹಾಗೂ ಸುಕೋ (SUKO) ತಜ್ಞರ ತಂಡವನ್ನು ಸ್ಥಳಕ್ಕೆ ಕರೆಸಲಾಗಿದೆ. ರಕ್ಷಣಾ ಹಾಗೂ ಪರಿಶೀಲನಾ ಕಾರ್ಯಾಚರಣೆ ಮುಂದುವರಿದಿದ್ದು, ಅಪಘಾತದ ನಿಖರ ಕಾರಣಗಳ ಕುರಿತು ತನಿಖೆ ನಡೆಯುತ್ತಿದೆ ಎಂದು ಪೂರ್ವ ವಲಯ ಐಜಿಪಿ ರವಿಕಾಂತೇಗೌಡ ತಿಳಿಸಿದ್ದಾರೆ.

ಅಪಘಾತದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿವೆ.

ಪ್ರಯಾಣಿಸುತ್ತಿದ್ದವರ ಯಾದಿ ಇಂತಿದೆ.

ಗಣ್ಯರಿಂದ ಶೋಕ ಸಂದೇಶ

ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದರು

ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಬಸ್ ಚಿತ್ರದುರ್ಗದ ಹಿರಿಯೂರು ಬಳಿ ಭೀಕರ ಅಪಘಾತಕ್ಕೀಡಾದ ಸುದ್ದಿ ಕೇಳಿ ಮನಸ್ಸಿಗೆ ಬೆಳ್ಳಂಬೆಳಗ್ಗೆ ಬರಸಿಡಿಲು ಬಡಿದಂತಾಗಿದೆ. ಸುಖಕರ ಪ್ರಯಾಣದ ನಿರೀಕ್ಷೆಯಲ್ಲಿದ್ದ ಒಂಬತ್ತಕ್ಕೂ ಹೆಚ್ಚು ಜೀವಗಳು ಅಗ್ನಿ ಅವಘಡದಲ್ಲಿ ಸಜೀವ ದಹನವಾಗಿರುವ ಘಟನೆ ಅತ್ಯಂತ ಹೃದಯವಿದ್ರಾವಕ. ವಿಧಿಯ ಆಟ ಎಷ್ಟು ಕ್ರೂರವೆಂದರೆ, ಮರಳಿ ಮನೆಗೆ ಬರುತ್ತಾರೆಂದು ಕಾಯುತ್ತಿದ್ದ ಕುಟುಂಬಗಳಿಗೆ ಇಂದು ಮರೆಯಲಾಗದ ಶೋಕದ ಕಡಲನ್ನೇ ಈ ದುರ್ಘಟನೆ ಉಡುಗೊರೆಯಾಗಿ ನೀಡಿದೆ.

​ಈ ಭೀಕರ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿದ್ದು, ರಾಜ್ಯ ಸರ್ಕಾರವು ಕೂಡಲೇ ಸ್ಪಂದಿಸಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಘೋಷಿಸಬೇಕು. ಗಾಯಾಳುಗಳಿಗೆ ಅತ್ಯಂತ ಶೀಘ್ರವಾಗಿ ಮತ್ತು ಗುಣಮಟ್ಟದ ಚಿಕಿತ್ಸೆ ದೊರೆಯುವಂತೆ ಮಾಡುವುದು ಸರ್ಕಾರದ ಆದ್ಯತೆಯಾಗಲಿ ಎಂದು ನಾನು ಒತ್ತಾಯಿಸುತ್ತೇನೆ.

​ವಿಧಿಯ ಅಟ್ಟಹಾಸಕ್ಕೆ ಬಲಿಯಾದ ಆತ್ಮಗಳಿಗೆ ಭಗವಂತನು ಚಿರಶಾಂತಿ ನೀಡಲಿ ಮತ್ತು ನೋವಿನಲ್ಲಿರುವ ಅವರ ಕುಟುಂಬಗಳಿಗೆ ಈ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ.

ಗಾಯಗೊಂಡವರು ಪ್ರಾಣಾಪಾಯದಿಂದ ಪಾರಾಗಿ ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.

 

 

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".