Home ಅಪರಾಧವಾಯು ವಿಹಾರಕ್ಕೆ ಹೊರಟವನ ಬರ್ಬರ ಹತ್ಯೆ

ವಾಯು ವಿಹಾರಕ್ಕೆ ಹೊರಟವನ ಬರ್ಬರ ಹತ್ಯೆ

by Editor
0 comments

ಕಾರವಾರ : ವಾಯು ವಿಹಾರಕ್ಕೆ ಹೊರಟಿದ್ದ ನಗರಸಭೆ ಮಾಜಿ ಸದಸ್ಯ ಸತೀಶ ಕೊಳಂಬಕರ (62) ಅವರನ್ನು ಚಾಕುವಿನಿಂದ ಇರಿದು ಕೊಂದ ಘಟನೆ ಇಲ್ಲಿಯ ಸಂತೆ ಮಾರುಕಟ್ಟೆಯಲ್ಲಿ ನಸುಕಿನ ಜಾವ ನಡೆದಿದೆ.

ಬೈಕ್ ಮೇಲೆ ಬಂದಿದ್ದ ಇಬ್ಬರು ವ್ಯಕ್ತಿಗಳು ಚಾಕುವಿನಿಂದ ಸತೀಶ ಅವರ ಎದೆಗೆ ಇರಿದು ಹತ್ಯೆ ಮಾಡಿದ್ದಾರೆ.

ವ್ಯಾವಹಾರಿಕ ವಿಚಾರದ ದ್ವೇಷದಿಂದ ಸತೀಶ ಅವರನ್ನು ಹತ್ಯೆ ಮಾಡಿರುವ ಶಂಕೆ ಇದೆ. ಅವರ ವಿರುದ್ಧ ಕಾರವಾರ ನಗರ ಠಾಣೆಯಲ್ಲಿ 8ಕ್ಕೂ ಹೆಚ್ಚು ಪ್ರಕರಗಳಿದ್ದು ಅವರನ್ನು ರೌಡಿ ಶೀಟ‌ರ್ ಪಟ್ಟಿಗೆ ಸೇರಿಸಲಾಗಿತ್ತು.

ಹತ್ತು ದಿನಗಳ ಹಿಂದೆ ನಗರದ ಹೊಟೆಲ್ ಒಂದರಲ್ಲಿ ಹಣಕಾಸಿನ ವಿಚಾರಕ್ಕೆ ಸತೀಶ ಮೇಲೆ ಹಲ್ಲೆ ನಡೆದಿತ್ತು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದ್ದಾರೆ. ಹತ್ಯೆ ನಡೆಸಿದ ಆರೋಪಿಗಳ ಸುಳಿವು ಸಿಕ್ಕಿದ್ದು ಬಂಧನಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ ಎಂದರು.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".