Home ಮಾಹಿತಿಕೆಪಿಎಸ್‌ಸಿ ಕೆಎಎಸ್‌ ಮುಖ್ಯ ಪರೀಕ್ಷೆ ಅಂತಿಮ ವೇಳಾಪಟ್ಟಿ ಬಿಡುಗಡೆ

ಕೆಪಿಎಸ್‌ಸಿ ಕೆಎಎಸ್‌ ಮುಖ್ಯ ಪರೀಕ್ಷೆ ಅಂತಿಮ ವೇಳಾಪಟ್ಟಿ ಬಿಡುಗಡೆ

by Editor
0 comments

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 13-02-2025 ರಲ್ಲಿ ಅಧಿಸೂಚಿಸಲಾದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ವೃಂದದ ಒಟ್ಟು 384 ಹುದ್ದೆಗಳ ಮುಖ್ಯ ಪರೀಕ್ಷೆಗೆ ಸಂಬಂಧ, ಇದೀಗ ಹೊಸ ದಿನಾಂಕಗಳನ್ನು ಅಂತಿಮವಾಗಿ ಬಿಡುಗಡೆ ಮಾಡಿದೆ. ಪರೀಕ್ಷಾ ವೇಳಾಪಟ್ಟಿಯನ್ನು ಆಯೋಗದ ಅಂತರ್ಜಾಲ http://kpsc.kar.nic.in ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಬಿಡುಗಡೆ ಮಾಡಿದ್ದು, ಮುಖ್ಯ ಪರೀಕ್ಷೆಗೆ ಅರ್ಹತೆ ಪಡಿದಿರುವವರು ವೇಳಾಪಟ್ಟಿ ಚೆಕ್‌ ಮಾಡಿಕೊಳ್ಳಿ.

ಪರೀಕ್ಷೆ ಹೆಸರು: ಕೆಎಎಸ್‌ – ಗೆಜೆಟೆಡ್ ಪ್ರೊಬೇಷನರ್ಸ್‌ ಮುಖ್ಯ ಪರೀಕ್ಷೆ 2025
ಮುಖ್ಯ ಪರೀಕ್ಷೆ ದಿನಾಂಕಗಳು : 03-05-2025, 05-05-2025, 07-05-2025, 09-05-2025.
ಕೆಎಎಸ್‌ ಮುಖ್ಯ ಪರೀಕ್ಷೆಯ ಕೇಂದ್ರಗಳು: ಬೆಂಗಳೂರು ಮತ್ತು ಧಾರವಾಡ ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ.

ಕೆಎಸ್ ಮುಖ್ಯ ಪರೀಕ್ಷೆ ನಂತರ ಮುಂದಿನ ಆಯ್ಕೆ ಪ್ರಕ್ರಿಯೆ ಏನು?
ಅರ್ಹ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಜೇಷ್ಠತೆ ಮತ್ತು ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ 1:3 ರ ಅನುಪಾತದಲ್ಲಿ ವ್ಯಕ್ತಿತ್ವ ಪರೀಕ್ಷೆಗೆ ಕರೆಯಲಾಗುವುದು.
ವ್ಯಕ್ತಿತ್ವ ಪರೀಕ್ಷೆಯು ಗರಿಷ್ಠ 25 ಅಂಕಗಳಿಗೆ ನಡೆಯಲಿದೆ.
ಮುಖ್ಯ ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಜೇಷ್ಠತೆ ಮತ್ತು ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳು ಮತ್ತು ಅರ್ಜಿಯಲ್ಲಿ ನೀಡಿರುವ ಆದ್ಯತೆಯನ್ವಯ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಲಾಗುವುದು.

ಅಭ್ಯರ್ಥಿಗಳಿಗೆ ಮುಖ್ಯ ಸೂಚನೆಗಳು
ಕೆಎಎಸ್‌ ಮೇನ್ಸ್‌ ಪರೀಕ್ಷೆಯಲ್ಲಿ ಕಡ್ಡಾಯ ಕನ್ನಡ ಮತ್ತು ಕಡ್ಡಾಯ ಇಂಗ್ಲಿಷ್‌ ಭಾಷಾ ಪರೀಕ್ಷೆಯನ್ನು ಒಳಗೊಂಡಿದ್ದು, ಪ್ರತಿ ಪತ್ರಿಕೆ 150 ಅಂಕಗಳನ್ನು ಒಳಗೊಂಡಿರುತ್ತದೆ. ಈ ಪತ್ರಿಕೆಯಲ್ಲಿ ಶೇಕಡ.35 ಅಂಕಗಳನ್ನು ಗಳಿಸಿದರೆ ಸಾಕು. ಈ ಎರಡೂ ಪತ್ರಿಕೆಗಳಲ್ಲಿ ನಿಗದಿತ ಅಂಕಗಳನ್ನು ಗಳಿಸದಿದ್ದಲ್ಲಿ,(ಅನುತ್ತೀರ್ಣರಾದಲ್ಲಿ) ಅಭ್ಯರ್ಥಿಗಳು ಇತರೆ ಪತ್ರಿಕೆಗಳಲ್ಲಿ ಎಷ್ಟೇ ಹೆಚ್ಚು ಅಂಕ ಗಳಿಸಿದರೂ ವ್ಯಕ್ತಿತ್ವ ಪರೀಕ್ಷೆಗೆ ಮತ್ತು ಆಯ್ಕೆಗೆ ಅರ್ಹರಲ್ಲ.
ಮುಖ್ಯ ಪರೀಕ್ಷೆಯ ಕಡ್ಡಾಯ ಕನ್ನಡ, ಕಡ್ಡಾಯ ಇಂಗ್ಲಿಷ್‌ ಎರಡೂ ಪತ್ರಿಕೆಗಳು ಎಸ್‌ಎಸ್‌ಎಲ್‌ಸಿ ಪ್ರಥಮ ಭಾಷೆಯ ಮಟ್ಟದ್ದಾಗಿರುತ್ತದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".