Home ರಾಜ್ಯರೋಹಿತ್‌ ವೇಮುಲ ಕಾಯ್ದೆ’ಯ ಜಾರಿಗೆ ತರಲು ಚಿಂತನೆ

ರೋಹಿತ್‌ ವೇಮುಲ ಕಾಯ್ದೆ’ಯ ಜಾರಿಗೆ ತರಲು ಚಿಂತನೆ

by Editor
0 comments

ಬೆಂಗಳೂರು: ಶಿಕ್ಷಣದಲ್ಲಿ ಜಾತಿ ತಾರತಮ್ಯ ತಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ‘ರೋಹಿತ್‌ ವೇಮುಲ ಕಾಯ್ದೆ’ಯ ಜಾರಿಗೆ ತರಲು ಚಿಂತನೆ ನಡೆಸುತ್ತಿದೆ.

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು. ಇದನ್ನು ಖಾತ್ರಿಪಡಿಸುವುದಕ್ಕಾಗಿ ʼರೋಹಿತ್‌ ವೇಮುಲಾ ಕಾಯ್ದೆʼ ಹೆಸರಿನ ಕಾನೂನನ್ನು ಕರ್ನಾಟಕದಲ್ಲೂ ರೂಪಿಸುವಂತೆ ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಪತ್ರದ ಮೂಲಕ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, ರಾಹುಲ್ ಗಾಂಧಿಯವರೇ ನಿಮ್ಮ ಸಹಾನುಭೂತಿಯ ಪತ್ರ ಮತ್ತು ನ್ಯಾಯಕ್ಕಾಗಿ ಅಚಲ ಧ್ವನಿಗೆ ಧನ್ಯವಾದಗಳು. ಜಾತಿ, ವರ್ಗ ಅಥವಾ ಗುರುತಿನ ಹೆಸರಿನಲ್ಲಿ ಯಾವುದೇ ವಿದ್ಯಾರ್ಥಿ ಎಂದಿಗೂ ತಾರತಮ್ಯ ಅಥವಾ ಬಹಿಷ್ಕಾರವನ್ನು ಎದುರಿಸದಂತೆ ನೋಡಿಕೊಳ್ಳಲು ನಮ್ಮ ಸರಕಾರ ಬದ್ಧ ಎಂದು ಹೇಳಿದ್ದಾರೆ.

ರೋಹಿತ್, ಪಾಯಲ್, ದರ್ಶನ್‌ ಮತ್ತು ಘನತೆಗೆ ಅರ್ಹರಾದ ಅಸಂಖ್ಯಾತರ ಕನಸುಗಳನ್ನು ಗೌರವಿಸಲು ಕಾನೂನನ್ನು ಆದಷ್ಟು ಶೀಘ್ರ ಸಿದ್ಧಪಡಿಸಲಾಗುವುದು. ಬಿ.ಆರ್. ಅಂಬೇಡ್ಕರ್‌ ಅವರ ಸಮಾನ, ಸಹಾನುಭೂತಿಯ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವತ್ತ ದಿಟ್ಟ ಹೆಜ್ಜೆ ಇಡಲಾಗುವುದು. ಆದಷ್ಟು ಬೇಗ ಈ ಕಾನೂನನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".