Home ವಿಶೇಷಏ.೧೯ ರಂದು ಗ್ರಾಹಕ-ಸಂವಾದ ಸಭೆ.

ಏ.೧೯ ರಂದು ಗ್ರಾಹಕ-ಸಂವಾದ ಸಭೆ.

by Editor
0 comments

ಕುಮಟಾ : ಘನವೆತ್ತ ಕರ್ನಾಟಕ ಸರ್ಕಾರದ ಇಂಧನ ಇಲಾಖೆಯ ನಿರ್ದೇಶನದಂತೆ ಕುಮಟಾ ಉಪ ವಿಭಾಗದ ವ್ಯಾಪ್ತಿಯಲ್ಲಿ ಏರ್ಪಡಿಸಲಾಗುವ ಗ್ರಾಹಕ ಸಂವಾದ ಸಭೆಯನ್ನು ಎಪ್ರಿಲ್ ತಿಂಗಳಿನ ಮೂರನೇಯ ಶನಿವಾರ ಏ.೧೯ ರಂದು  ಮುಂಜಾನೆ ೧೦.೩೦ ರಿಂದ ಮಧ್ಯಾಹ್ನ ೧.೩೦ ಗಂಟೆವರೆಗೆೆ ಕುಮಟಾ ಉಪ-ವಿಭಾಗದ ಆವರಣದಲ್ಲಿ ನಡೆಸಲಾಗುವುದು.

ಆ ದಿನ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಹಾಜರಿದ್ದು, ತಮ್ಮ ಸಮಸ್ಯೆಗಳನ್ನು ನಿವೇದಿಸಿಕೊಂಡು, ಇಲಾಖೆಯ ಅಧಿಕಾರಿಗಳೊಡನೆ ಶಾಂತಿಯುತವಾಗಿ ಸೌಹಾರ್ದಯುತವಾಗಿ ಸಮಾಲೋಚಿಸಿ, ಇಲಾಖೆಯ ನಿಯಮಾವಳಿ ಅಡಿಯಲ್ಲಿ ಬಗೆಹರಿಸಿಕೊಳ್ಳಬೇಕೆಂದು ಹೆಸ್ಕಾಂ, ಕುಮಟಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ರವರು ವಿನಂತಿಸಿಕೊಂಡಿರುತ್ತಾರೆ.  ಈ ಕುರಿತು ಗ್ರಾಹಕರಿಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕಚೇರಿ ವೇಳೆಯಲ್ಲಿ ೦೮೩೮೬-(೨೨೨೦೩೪/೨೨೪೮೬೫/೨೫೬೧೭೭) ದೂರವಾಣಿಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".