Home ವಿಶೇಷಜಿಲ್ಲಾ ಗ್ರಾಮ ಒಕ್ಕಲು ಯುವ ಬಳಗದಿಂದ ಆರ್ಥಿಕ ಸಹಾಯ

ಜಿಲ್ಲಾ ಗ್ರಾಮ ಒಕ್ಕಲು ಯುವ ಬಳಗದಿಂದ ಆರ್ಥಿಕ ಸಹಾಯ

by Editor
0 comments

ಕುಮಟಾ : ತಾಲೂಕಿನ ನಾಗೂರು ನಿವಾಸಿ ರಾಜು ತಿಮ್ಮಪ್ಪ ಪಟಗಾರ, ಇವರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ತೆಂಗಿನಮರದಿಂದ ಬಿದ್ದು ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದು, ಅವರಿಗೆ ಆರ್ಥಿಕವಾಗಿ ಸಹಾಯವಾಗಲಿ ಎನ್ನುವ ದೃಷ್ಟಿಯಿಂದ ಗ್ರಾಮ ಒಕ್ಕಲು ಯುವ ಬಳಗದವರು ಸೋಮವಾರ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ ಅವರಿಗೆ 7,500 ರೂ. ಸಹಾಯ ಧನವನ್ನು ವಿತರಿಸಿ ಬೇಗ ಗುಣಮುಖರಾಗಲಿ ಎಂದು ಬಳಗದವರು ಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ರಾಮ ಒಕ್ಕಲು ಯುವ ಬಳಗದ ಸದಸ್ಯರು ಹಾಗೂ ಸ್ಥಳೀಯ ಯುವ ಬಳಗದ ಸದಸ್ಯರು ಹಾಜರಿದ್ದರು, ಸುಮಾರು ಹನ್ನೊಂದು ವರ್ಷಗಳಿಂದ ನಿರಂತರವಾಗಿ ಒಂದಲ್ಲ ಒಂದು ರೀತಿಯಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ಜಿಲ್ಲಾ ಗ್ರಾಮ ಒಕ್ಕಲು ಯುವ ಬಳಗದವರ ಕಾರ್ಯವು ಮೆಚ್ಚುವಂತಹದ್ದಾಗಿದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".