Home ರಾಜ್ಯಜನಿವಾರ ವಿವಾದ: ಯಾವ ಇಲಾಖೆಯೂ ಇಂತಹ ನಿರ್ದೇಶನ ಕೊಟ್ಟಿಲ್ಲ

ಜನಿವಾರ ವಿವಾದ: ಯಾವ ಇಲಾಖೆಯೂ ಇಂತಹ ನಿರ್ದೇಶನ ಕೊಟ್ಟಿಲ್ಲ

by Editor
0 comments

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಕಿದ್ದ ಜನಿವಾರ ತೆಗೆಸಿದ ಘಟನೆಯನ್ನು ರಾಜ್ಯ ಸರ್ಕಾರ ಖಂಡಿಸಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ.

ವಿವಾದ ಕುರಿತು ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಯಾವ ಇಲಾಖೆಯೂ ಇಂತಹ ನಿರ್ದೇಶನ ಕೊಟ್ಟಿಲ್ಲ. ಘಟನೆಗೆ ಕಾರಣರಾದವರ ವಿರುದ್ದ ಕ್ರಮ ಆಗಬೇಕು. ಪರೀಕ್ಷೆಯಿಂದ ವಂಚಿತರಾದವರಿಗೆ ಮರುಪರೀಕ್ಷೆ ಕೊಡುವ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.

ಪ್ರಕರಣದ ಕುರಿತು ನಿಖರ ಮಾಹಿತಿ ಪಡೆಯುತ್ತೇನೆ. ಜನಿವಾರ ತೆಗೆಯುವ ನಿಯಮ ಇಲ್ಲ. ಜಾತಿ ಧರ್ಮಗಳಿಗೆ ಗೌರವ ಕೊಡಬೇಕಾಗುತ್ತದೆ. ಘಟನೆಗೆ ಕಾರಣರಾದವರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್ ಅವರು ಪ್ರತಿಕ್ರಿಯೆ ನೀಡಿ, ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆಗಿದ್ದರೆ ಅದು ಅತಿರೇಕದ ವರ್ತನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆಂದು ಹೇಳಿದ್ದಾರೆ.

ಎಲ್ಲಾ ಜಾತಿ, ಧರ್ಮಗಳ ಆಚರಣೆ ಸಂಪ್ರದಾಯಕ್ಕೆ ಗೌರವ ಕೊಡಬೇಕು. ನಾನು ಈ ರೀತಿಯ ಘಟನೆಗಳಿಗೆಲ್ಲ ಪ್ರೋತ್ಸಾಹ ಕೊಡುವುದಿಲ್ಲ. ಘಟನೆ ಸಂಬಂಧ ಅಧಿಕಾರಿಗಳ ಬಳಿ ವರದಿ ಪಡೆದು, ಮುಂದೆ ಏನು ಮಾಡಬಹುದು ಎಂದು ಯೋಚಿಸುತ್ತೇನೆ. ಆ ರೀತಿ ಆಗಿದ್ದು ಸತ್ಯವೇ ಆದರೆ ಇನ್ನೊಮ್ಮೆ ಪರಿಶೀಲನೆ ಮಾಡುತ್ತೇನೆ. ಆಯ್ದ ವಿಚಾರ ಎತ್ತಿಕೊಂಡು ರಾಜಕೀಯ ಲಾಭ ಮಾಡುವುದಲ್ಲ. ಯಾವುದೇ ಸಮುದಾಯವನ್ನು ನೋವಿಸುವ ಉದ್ದೇಶ ನಮ್ಮದಲ್ಲ ಎಂದು ತಿಳಿಸಿದ್ದಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".