Home ದೇಶಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಏರಿಕೆ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಏರಿಕೆ

by Editor
0 comments

ಮಂಗಳೂರು : ರಾಜ್ಯದ ಪ್ರಸಿದ್ಧ ದೇವಾಲಯ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಏರಿಕೆಯಾಗಿದೆ.

2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ. ಕಳೆದ ವರ್ಷ ವಾರ್ಷಿಕ ಆದಾಯ 146.01 ಕೋಟಿ ರೂ. ಆಗಿತ್ತು. ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಹೆಚ್ಚಳವಾಗಿದೆ. ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ರಾಜ್ಯದ ಶ್ರೀಮಂತ ದೇವಸ್ಥಾನ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.

ಕಳೆದ ವರ್ಷವೂ ಪ್ರಥಮ ಸ್ಥಾನದಲ್ಲಿತ್ತು. ಈ ಭಾರಿ ಕೂಡ ವಾರ್ಷಿಕ ಆದಾಯದಲ್ಲಿ ಏರಿಕೆಯಿಂದಾಗಿ ಮತ್ತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತನ್ನ ನಂ.1 ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ದತ್ತಿ ಇಲಾಖೆಯಡಿ ಬರುತ್ತದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ನಾಗಾರಾಧನೆಯ ಪ್ರಮುಖ ಕ್ಷೇತ್ರವಾಗಿದ್ದು, ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಂದಲೂ ನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಾರೆ. ಸರ್ಪ ಸಂಸ್ಕಾರ ಸೇರಿದಂತೆ ವಿವಿಧ ಸೇವೆ ಹಾಗೂ ಇತರ ಮೂಲಗಳಿಂದ ಒಟ್ಟು 155.95 ಕೋಟಿ ರೂ. ಆದಾಯವಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವರ್ಷವಾರು ಆದಾಯ
2020-21ರಲ್ಲಿ 68.94 ಕೋಟಿ ರೂ.
2021-22 ರಲ್ಲಿ 72.73 ಕೋಟಿ ರೂ.
2022-23ರಲ್ಲಿ 123 ಕೋಟಿ ರೂ.
2023-24ರಲ್ಲಿ 146.01 ಕೋಟಿ ರೂ.
2024-25ರಲ್ಲಿ 155.95 ಕೋಟಿ ರೂ.
ಅತೀ ಹೆಚ್ಚು ಆದಾಯ ಗಳಿಸುವ ದೇವಾಲಯಗಳ ಪಟ್ಟಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಪ್ರಥಮ ಸ್ಥಾನದಲ್ಲಿದ್ದರೆ, ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ದೇವಸ್ಥಾನ ಎರಡನೇ ಸ್ಥಾನದಲ್ಲಿದೆ.

ಈ ದೇವಸ್ಥಾನದ ಆದಾಯ 31 ಕೋಟಿ ರೂ. ಅದೇ ರೀತಿಯಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನವು 20 ಕೋಟಿ ರೂ.ಗಳ ಅಂದಾಜು ಆದಾಯದೊಂದಿಗೆ ಮೂರನೇ ಸ್ಥಾನದಲ್ಲಿದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".