Home ದೇಶಅಮೆರಿಕ ಜೊತೆ ನಮ್ಮ ಸಹಭಾಗಿತ್ವವನ್ನು ಮುನ್ನಡೆಸಲು ಭಾರತ ಬದ್ಧ

ಅಮೆರಿಕ ಜೊತೆ ನಮ್ಮ ಸಹಭಾಗಿತ್ವವನ್ನು ಮುನ್ನಡೆಸಲು ಭಾರತ ಬದ್ಧ

by Editor
0 comments

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಮುಖ ಸಲಹೆಗಾರ, ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ಸಹಯೋಗದ ಅಗಾಧ ಸಾಮರ್ಥ್ಯದ ಬಗ್ಗೆ ಇಬ್ಬರೂ ಚರ್ಚಿಸಿದ್ದಾರೆ.

ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್ ಸೇರಿದಂತೆ ಮಸ್ಕ್ ಅವರ ವ್ಯವಹಾರ ಕಂಪೆನಿಗಳ ಬಗ್ಗೆ ಮಾತುಕತೆ ನಡೆಸಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.

ಈ ಕ್ಷೇತ್ರಗಳಲ್ಲಿ ಅಮೆರಿಕದೊಂದಿಗೆ ನಮ್ಮ ಪಾಲುದಾರಿಕೆಯನ್ನು ಮುಂದುವರಿಸಲು ಭಾರತ ಬದ್ಧವಾಗಿದೆ ಎಂದು ಮೋದಿ ಹೇಳಿದರು. ಡೊನಾಲ್ಡ್ ಟ್ರಂಪ್ ಆಡಳಿತದಲ್ಲಿ ಮಸ್ಕ್ ಅವರನ್ನು ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ.

ಇವರು ಟ್ರಂಪ್ ಸರ್ಕಾರದಲ್ಲಿ ವೆಚ್ಚವನ್ನು ಕಡಿತಗೊಳಿಸುವ ಮತ್ತು ಫೆಡರಲ್ ಕಾರ್ಯಪಡೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಸರ್ಕಾರಿ ದಕ್ಷತೆ ಇಲಾಖೆಯನ್ನು ಮುನ್ನಡೆಸುತ್ತಿದ್ದಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".