Home ದೇಶಮಂಗನ ಖಾಯಿಲೆಗೆ ಬಾಲಕ ಬಲಿ

ಮಂಗನ ಖಾಯಿಲೆಗೆ ಬಾಲಕ ಬಲಿ

by Editor
0 comments

ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ದತ್ತರಾಜಪುರ ಗ್ರಾಮದ 8 ವರ್ಷದ ಬಾಲಕ ಗುರುವಾರ ರಾತ್ರಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮಂಗನ ಕಾಯಿಲೆ(ಕೆಎಫ್‌ಡಿ)ಗೆ ಬಲಿಯಾಗಿದ್ದು, ಮೃತ ಬಾಲಕನನ್ನು ರಚಿತ್ ಎಂದು ಗುರುತಿಸಲಾಗಿದೆ.

ಆರೋಗ್ಯ ಅಧಿಕಾರಿಗಳ ಪ್ರಕಾರ, ರಚಿತ್ ಅವರ ಸಹೋದರಿ ರಮ್ಯಾ ಅವರಿಗೆ ಏಪ್ರಿಲ್ 4 ರಂದು ಜ್ವರ ಬಂದಿತ್ತು. ಆಕೆಯನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಿ ಪರೀಕ್ಷೆಗೆ ಒಳಪಡಿಸಿದಾಗ ಕೆಎಫ್‌ಡಿ ಪಾಸಿಟಿವ್ ದೃಢಪಟ್ಟಿತ್ತು. ಮರುದಿನ, ಏಪ್ರಿಲ್ 5 ರಂದು, ರಚಿತ್ ನನ್ನು ಆಯಾಸ ಮತ್ತು ವಾಂತಿಯಿಂದ ಅದೇ ಆಸ್ಪತ್ರೆಗೆ ದಾಖಲಿಸಲಾಯಿತು. ಅವರಿಗೂ ಕೆಎಫ್ ಡಿ ಪಾಸಿಟಿವ್ ಬಂದಿದೆ.

ನಂತರ ಏಪ್ರಿಲ್ 6 ರಂದು, ಇಬ್ಬರೂ ಮಕ್ಕಳನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ(ಎಬಿಎಆರ್‌ಕೆ) ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಯಿತು.

ರಮ್ಯಾ ಚಿಕಿತ್ಸೆಗೆ ಸ್ಪಂದಿಸಿ ಡಿಸ್ಚಾರ್ಜ್ ಆಗಿದ್ದರೂ, ರಚಿತ್ ಅವರ ಆರೋಗ್ಯ ಸುಧಾರಿಸಲಿಲ್ಲ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ವೈದ್ಯರ ಪ್ರಯತ್ನದ ಹೊರತಾಗಿಯೂ ಬಾಲಕ ಗುರುವಾರ ತಡರಾತ್ರಿ ಮೃತಪಟ್ಟಿದ್ದಾನೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".