Home ಅಪರಾಧಗರ್ಭಿಣಿ ಹಸುವನ್ನು ಕೊಂದ ಕಿರಾತಕರು

ಗರ್ಭಿಣಿ ಹಸುವನ್ನು ಕೊಂದ ಕಿರಾತಕರು

by Editor
0 comments

ಭಟ್ಕಳ : ತಾಲೂಕಿನಲ್ಲಿ ಗರ್ಭಿಣಿ ಹಸುವನ್ನು ಕಡಿದು ಹತ್ಯೆ ಮಾಡಿದ ಘಟನೆ ವರದಿಯಾಗಿದೆ. ಭಟ್ಕಳ ತಾಲೂಕಿನ ಹೆಬಳೆಯ ಕುಕ್‌ನೀರ್ ಬಳಿಯಲ್ಲಿ ಗರ್ಭಿಣಿ ಹಸು ಕಡಿದು ಹೊಟ್ಟೆಯೊಳಗಿದ್ದ ಕರು ಮತ್ತು ಗೋವಿನ ಬಾಲವನ್ನು ವೆಂಕಟಾಪುರ ನದಿಯಂಚಿನಲ್ಲಿ ಎಸೆದ ದುರುಳರು ಗೋಮಾಂಸದೊಂದಿಗೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ಗೋವಿನ ಹೊಟ್ಟೆಯೊಳಗಿದ್ದ ಪುಟ್ಟ ಕರುವನ್ನು ಗೋಣಿ ಚೀಲದಲ್ಲಿ ಸುತ್ತಿ ಬಿಸಾಡಿದ್ದು, ಗುರುವಾರ ನಾಯಿಯೊಂದು ಚೀಲವನ್ನು ಎಳೆಯುತ್ತಿರುವಾಗ ಸ್ಥಳೀಯರು ನೋಡಿ ಪರಿಶೀಲಿಸಿದ್ದಾರೆ. ಆಗ ಅದರಲ್ಲಿ ಸತ್ತ ಕರು ಇರುವುದು ಪತ್ತೆಯಾಗಿದೆ. ಜೊತೆಗೆ ಹಸುವಿನ ಬಾಲ ಕೂಡ ಅಲ್ಲಿಯೇ ಕಂಡುಬಂದಿದೆ. ತಕ್ಷಣ ಅವರು ಗ್ರಾಮೀಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ.

ಸ್ಥಳಕ್ಕಾಗಮಿಸಿದ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಆರೋಪಿಗಳನ್ನು ತಕ್ಷಣವೇ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".