558
ಬೆಂಗಳೂರು : ರಾಜ್ಯದಲ್ಲಿ ಡೀಸೆಲ್ ಬೆಲೆ, ಟೋಲ್ ದರ ಹೆಚ್ಚಳ ವಿರೋಧಿಸಿ 3 ದಿನಗಳಿಂದ ಲಾರಿ ಮಾಲೀಕರ ಸಂಘ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಅಂತ್ಯವಾಗಿದೆ.
ಏ. 14ರ ಮಧ್ಯರಾತ್ರಿಯಿಂದ ರಾಜ್ಯದಲ್ಲಿ ಮುಷ್ಕರ ನಡೆಸುತ್ತಿದ್ದ ಲಾರಿ ಮಾಲೀಕರೊಂದಿಗೆ ಸಚಿವ ರಾಮಲಿಂಗಾ ರೆಡ್ಡಿ ಗುರುವಾರ (ಏ. 17) ನಡೆಸಿದ ಮಾತುಕತೆ ಯಶಸ್ವಿಯಾಗಿದೆ.

ಲಾರಿ ಮಾಲೀಕರ ಬೇಡಿಕೆ ಈಡೇರಿಸಲು ಮುಂದಾಗುವುದಾಗಿ ಸಚಿವ ಸಚಿವ ರಾಮಲಿಂಗಾ ರೆಡ್ಡಿ ಭರವಸೆ ನೀಡಿದ ಹಿನ್ನಲೆಯಲ್ಲಿ ಲಾರಿ ಮುಷ್ಕರ ಹಿಂಪಡೆಯುವುದಾಗಿ ಪದಾಧಿಕಾರಿಗಳು ಘೋಷಿಸಿದರು.
ಗುರುವಾರ ವಿಧಾನಸೌಧದಲ್ಲಿನ ರಾಮಲಿಂಗಾರೆಡ್ಡಿ ಅವರ ಕಚೇರಿಯಲ್ಲಿ ಲಾರಿ ಮಾಲೀಕರ ಸಂಘದೊಂದಿಗೆ ನಡೆಸಿದ ಸಭೆ ಯಶಸ್ವಿಯಾಗಿದೆ. ಈ ಹಿಂದಿನ ಎರಡು ಸಭೆಗಳು ಒಮ್ಮತಕ್ಕೆ ಬರಲು ವಿಫಲವಾಗಿತ್ತು.