Home ದೇಶಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ರಾಘವೇಶ್ವರ ಶ್ರೀ ಕರೆ

ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ರಾಘವೇಶ್ವರ ಶ್ರೀ ಕರೆ

by Editor
0 comments

ಗೋಕರ್ಣ: ಬೀದರ್‍ನಲ್ಲಿ ಜನಿವಾರದ ಕಾರಣಕ್ಕಾಗಿ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡದ ಘಟನೆ ಮತ್ತು ಶಿವಮೊಗ್ಗದಲ್ಲಿ ಜನಿವಾರ ತುಂಡರಿಸಿದ ಘಟನೆ ತೀರಾ ವಿಷಾದನೀಯ; ಈ ದುರ್ವರ್ತನೆಯನ್ನು ಸಮಸ್ತ ಸಮಾಜ ಪ್ರತಿಭಟಿಸಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಕರೆ ನೀಡಿದ್ದಾರೆ.

ಅಧಿಕಾರಿಗಳ ಈ ವರ್ತನೆಯ ಹಿಂದ ದ್ವೇಷ, ಜಾತಿದ್ವೇಷ, ಒಂದು ಜಾತಿಯನ್ನು ಸಂಪೂರ್ಣ ತುಳಿದು ಬಿಡಬೇಕು ಎನ್ನುವ ಭಾವ ಕಾಣಿಸುತ್ತಿದೆ. ಪರೀಕ್ಷೆಗಳು ಮಕ್ಕಳ ಹಣೆಬರಹವನ್ನು ನಿರ್ಧರಿಸುವಂಥದ್ದು; ವಿದ್ಯಾರ್ಥಿಗಳು ಪರೀಕ್ಷೆಯ ಮಾನಸಿಕ ಒತ್ತಡದಲ್ಲಿರುವಾಗ ಅಧಿಕಾರಿಗಳು ಕ್ರೌರ್ಯ ಮೆರೆದಿರುವುದು ದಬ್ಬಾಳಿಕೆ ನಡೆಸಿರುವುದು ಖಂಡನೀಯ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಜನಿವಾರ ಕೀಳುವಾಗ ಮನಸ್ಸಿಗೆ ಎಂಥ ನೋವಾಗುತ್ತದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಬ್ರಾಹ್ಮಣರು ಇದನ್ನು ಸಹಿಸಬಾರದು; ಇದನ್ನು ಇಲ್ಲಿಗೇ ಬಿಟ್ಟರೆ ದೇಶದಲ್ಲಿ ಬದುಕಲೂ ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಎಚ್ಚರಿಸಿದ್ದಾರೆ.

ಈ ಕೃತ್ಯವನ್ನು ಬ್ರಾಹ್ಮಣರು ಸಂಘಟಿತರಾಗಿ ಪ್ರತಿಭಟಸುವುದು ಅಗತ್ಯ ಮಾತ್ರವಲ್ಲ; ಅನಿವಾರ್ಯವೂ ಹೌದು. ಇದು ಬ್ರಾಹ್ಮಣರಿಗಷ್ಟೇ ಸೀಮಿತವಲ್ಲ; ಬೇರೆಯವರೂ ಜನಿವಾರವನ್ನು ಗೌರವದಿಂದ ಧಾರಣೆ ಮಾಡುತ್ತಾರೆ. ಲಿಂಗಾಯಿತರು ಕೂಡಾ ಲಿಂಗವನ್ನು ಧರಿಸುತ್ತಾರೆ. ಅದನ್ನೂ ಇಂಥದ್ದೇ ಸೂತ್ರದಿಂದ ಧರಿಸಲಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಇಡೀ ಸಮಾಜಕ್ಕೆ ಅಪಾಯ ಕಾದಿದೆ ಎಂದು ಹೇಳಿದ್ದಾರೆ.
ಧಾರ್ಮಿಕ ಚಿಹ್ನೆಯನ್ನು ತೆಗೆದುಹಾಕಿದರೆ ಪರೀಕ್ಷೆ ಬರೆಯುವುದಿಲ್ಲ ಎಂದು ದೃಢ ನಿರ್ಧಾರ ಕೈಗೊಂಡ ವಿದ್ಯಾರ್ಥಿಗೆ ಅಭಿನಂದನೆ ಸಲ್ಲಿಸುತ್ತೇವೆ. ಧಾರ್ಮಿಕತೆಯಲ್ಲಿ ರಾಜಿ ಮಾಡಿಕೊಳ್ಳದ ವಿದ್ಯಾರ್ಥಿಯನ್ನು ಮೆಚ್ಚಬೇಕು. ಜನಿವಾರದ ಕಾರಣಕ್ಕೆ ಪರೀಕ್ಷೆ ಬರೆಯಲು ಸಾಧ್ಯವಾಗದ ಎಲ್ಲರಿಗೂ ಸಹಾಯಹಸ್ತ ಚಾಚಲು ಶ್ರೀಮಠ ಸಿದ್ಧ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇಡೀ ಬ್ರಾಹ್ಮಣ ಸಮಾಜ ಮಾತ್ರವಲ್ಲ; ಭಾರತೀಯರೆಲ್ಲರೂ ಒಗ್ಗೂಡಿ ತಕ್ಕ ಪ್ರತಿಕ್ರಿಯೆ ನೀಡಬೇಕು ಎಂದು ಅವರು ಆಶಿಸಿದ್ದಾರೆ.

ಹವ್ಯಕ ಮಹಾಮಂಡಲ ಕೂಡಾ ಘಟನೆಯನ್ನು ಖಂಡಿಸಿದ್ದು, ಸಮಗ್ರ ಹವ್ಯಕ ಮಹಾಮಂಡಲ ಸಭೆಯಲ್ಲಿ ಈ ಬಗ್ಗೆ ಖಂಡನಾ ನಿರ್ಣಯ ಆಂಗೀಕರಿಸಿದೆ. ಅಕ್ಷಮ್ಯ ಅಪರಾಧ ಎಸಗಿದ ಅಧಿಕಾರಿಗಳಿಗೆ ಶಿಕ್ಷೆ ವಿಧಿಸಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕು. ಜನಿವಾರ ಕಾರಣಕ್ಕೆ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿ, ವಿದ್ಯಾರ್ಥಿಯ ಭವಿಷ್ಯ ಹಾಗೂ ಆತ್ಮಗೌರವ ರಕ್ಷಿಸಬೇಕು ಎಂದು ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ ಆಗ್ರಹಿಸಿದ್ದಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".