Home ಜಿಲ್ಲೆಚುಟುಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಆಹ್ವಾನ

ಚುಟುಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಆಹ್ವಾನ

by Editor
0 comments

ಕುಮಟಾ : ತಾಲೂಕಾ 4 ನೇ ಚುಟುಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಕವಿ,ಸಾಹಿತಿ, ಕಲಾವಿದ ತಿಗಣೇಶ ಮಾಗೋಡ ರವರನ್ನು ಸಮ್ಮೇಳನಕ್ಕೆ ಆಮಂತ್ರಿಸಲಾಯಿತು.

ಸಮಿತಿಯ ಪರವಾಗಿ ಕುಮಟಾ ತಾಲೂಕಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಗಣಪತಿ ಅಡಿಗುಂಡಿ, ಮಾರ್ಗದರ್ಶಕ ರವೀಂದ್ರ ಭಟ್ಟ ಸೂರಿ, ಪ್ರಧಾನ ಕಾರ್ಯದರ್ಶಿ ಉದಯ ಮಡಿವಾಳ ರವರು ತಿಗಣೇಶ ಮಾಗೋಡ ದಂಪತಿಗಳಿಗೆ ಸನ್ಮಾನಿಸಿ ಸಮ್ಮೇಳನಕ್ಕೆ ಆಮಂತ್ರಿಸಿದರು.

ಏಪ್ರಿಲ್ 26 ರಂದು ಕುಮಟಾದ ಪುರಭವನದಲ್ಲಿ ನಡೆಯಲಿರುವ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ವಿಜಯಲಕ್ಷ್ಮೀ ಹೆಗಡೆಯವರ ಕೃತಿ “ಗಝಲ್ ನಗರಿಯಲ್ಲಿ ಹೆಜ್ಜೆಗಳ ಗುರುತು” ಲೋಕಾರ್ಪಣೆಗೊಳ್ಳಲಿದ್ದು ವಿವಿಧ ಗೋಷ್ಠಿಗಳು ನಡೆಯಲಿವೆ.

ಹಲವು ಗಣ್ಯರು ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದು ಜಿಲ್ಲಾ ಮಟ್ಟದ ಚುಟುಕು ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಲಿದೆ. ಸಂಸ್ಮರಣ ಸಂಚಿಕೆ ‘ ಕುಮಟಾ ಮುಕುಟ’ ಇದೇ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".