Home ಜಿಲ್ಲೆಶ್ರೀ ಶಾರದಾಂಬಾ ಮತ್ತು ಚಂದ್ರಮೌಳೀಶ್ವರ ದೇವಸ್ಥಾನದ ಶಿಲಾ ಮಂದಿರ ಲೋಕಾರ್ಪಣೆ

ಶ್ರೀ ಶಾರದಾಂಬಾ ಮತ್ತು ಚಂದ್ರಮೌಳೀಶ್ವರ ದೇವಸ್ಥಾನದ ಶಿಲಾ ಮಂದಿರ ಲೋಕಾರ್ಪಣೆ

by Editor
0 comments

ಹೊನ್ನಾವರ: ಪಟ್ಟಣದ ರಥಬೀದಿಯಲ್ಲಿರುವ ಶ್ರೀ ಶಾರದಾಂಬಾ ಹಾಗೂ ಚಂದ್ರಮೌಳೀಶ್ವರ ದೇವಸ್ಥಾನದ ನವೀಕೃತ ಶಿಲಾ ಮಂದಿರ ಲೋಕಾರ್ಪಣೆ, ದೇವರ ಪ್ರತಿಷ್ಠಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.

ಶೃಂಗೇರಿ ಶಾರದಾ ಪೀಠಾಧೀಶ್ವರ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ನವೀಕೃತ ಶಿಲಾಮಯ ಗರ್ಭಗುಡಿಯಲ್ಲಿ ಶ್ರೀ ಶಾರದಾಂಬಾ ದೇವಿ, ಶ್ರೀ ಚಂದ್ರಮೌಳೀಶ್ವರ ಪುನಃ ಪ್ರತಿಷ್ಠಾ ಕುಂಭಾಭಿಷೇಕ, ಶಿಖರ ಕಲಶಾಭಿಷೇಕ ಮತ್ತು ಪೂಜೆ ನಡೆಸಿದರು. ಶ್ರೀ ಶಂಕರಾಚಾರ್ಯರ ಮೂರ್ತಿ ಪ್ರತಿಷ್ಠಾಪನೆ ನಡೆಯಿತು. ನವೀಕೃತ ಶಿಲಾಮಂದಿರದಲ್ಲಿ ಪ್ರತಿಷ್ಠಾಪನೆಗೊಂಡ ದೇವರನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡು ಪ್ರಾರ್ಥನೆ ಸಲ್ಲಿಸಿದರು.

ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರನ್ನು ಭವ್ಯ ಮೆರವಣಿಗೆಯ ಮೂಲಕ ದೇವಸ್ಥಾನಕ್ಕೆ ಸ್ವಾಗತಿಸಲಾಯಿತು. ದೇವಸ್ಥಾನ ಸಮಿತಿಯಿಂದ ನಮನ ಸ್ವೀಕರಿಸಿದ ಶ್ರೀ ವಿಧುಶೇಖರ ಸ್ವಾಮೀಜಿಯವರು ಆಶೀರ್ವಚನ ನೀಡಿ, ‘ನಮ್ಮ ಪರಂಪರೆಯ ಬಗ್ಗೆ ಶೃದ್ಧಾಭಕ್ತಿಯನ್ನು ಹೊಂದಿರಬೇಕು. ಧರ್ಮ ಆಚರಣೆಯಿಂದ ಪುಣ್ಯಫಲ ಸಿಗುತ್ತದೆ. ವಿದ್ಯೆ, ಐಶ್ವರ್ಯ, ಅಧಿಕಾರ ಇದ್ದರೂ ಫುಣ್ಯ ಇಲ್ಲದಿದ್ದರೆ ಯಾವದರಲ್ಲೂ ಸುಖ ಸಿಗುವುದಿಲ್ಲ. ಸುಖ ಅನುಭವಿಸಲು ಪುಣ್ಯ ಬೇಕು. ಭಗವಂತ ಎಲ್ಲರಿಗೆ ಎಲ್ಲವನ್ನೂ ಕೊಟ್ಟಿರುವುದಿಲ್ಲ. ಪ್ರತಿಯೊಬ್ಬರಿಗೂ ಒಂದೊಂದು ರೀತಿಯ ಸಾಮರ್ಥ್ಯವನ್ನು ನೀಡಿರುತ್ತಾನೆ. ದೇವರ ಸೇವೆ ಮತ್ತು ಇನ್ನೊಬ್ಬರಿಗೆ ಒಳಿತು ಮಾಡುವುದರಿಂದ ಪುಣ್ಯ ಲಭಿಸುತ್ತದೆ. ದೇವರು ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದರು.

ಶ್ರೀಗಳಿಗೆ ನಮನ ಕಾರ್ಯಕ್ರಮದಲ್ಲಿ ವಿದ್ವಾಂಸ ಪತಂಜಲಿ ವೀಣಾಕರ ಅಭಿನಂದನಾ ಪತ್ರ ವಾಚಿಸಿದರು. ದೇವಸ್ಥಾನದ ಟ್ರಸ್ಟಿ ಲಕ್ಷ್ಮಣ ಮೇಸ್ತ ಹಾಗೂ ಸಮಾಜ ಬಾಂಧವರು ನಮನ ಸಲ್ಲಿಸಿದರು. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸುಬ್ರಾಯ ಆರ್. ಮೇಸ್ತ ಪ್ರಾಸ್ತಾವಿಕ ಮಾತನಾಡಿದರು. ಚಾರೋಡಿ ಸಮಾಜದ ಮುಖಂಡರು ಹಾಗೂ ವಿವಿಧ ಸಮಾಜದ ಭಕ್ತರು ಪಾಲ್ಗೊಂಡಿದ್ದರು. ನಾಲ್ಕು ದಿನಗಳ ಕಾಲ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ, ಅನ್ನಸಂತರ್ಪಣೆ ನಡೆಯಿತು.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".