Home ರಾಜ್ಯಬಸ್‌ಗಳ ಮೇಲಿನ ಈ ಜಾಹೀರಾತು ತೆರವು

ಬಸ್‌ಗಳ ಮೇಲಿನ ಈ ಜಾಹೀರಾತು ತೆರವು

by Editor
0 comments

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ದ ಬಸ್‌ಗಳ ಮೇಲಿನ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಕೂಡಲೇ ಸಂಪೂರ್ಣ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಸೂಚನೆ ನೀಡಿದೆ.

ಸಿಎಂ ಕಚೇರಿ ಸೂಚನೆ ಮೇರೆಗೆ ಕೆಎಸ್ ಆರ್ ಟಿಸಿ, ಸಂಬಂಧಪಟ್ಟ ಜಾಹೀರಾತು ಪರವಾನಗಿದಾರರಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು, ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಕ್ರಮಕೈಗೊಳ್ಳಲಾಗಿದೆ.

ನಾಗರಿಕರೊಬ್ಬರು ಸಾಮಾಜಿಕ ಮಾಧ್ಯಮದ ಮೂಲಕ ಬಸ್ ಗಳಲ್ಲಿ ತಂಬಾಕು ಜಾಹೀರಾತಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಸಂಬಂಧ ಏಪ್ರಿಲ್ 8 ರಂದು ಮುಖ್ಯಮಂತ್ರಿಗೆ ವಿಶೇಷ ಕರ್ತವ್ಯ ಅಧಿಕಾರಿಯನ್ನು ಟ್ಯಾಗ್ ಮಾಡಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಸಿರಾಜ್ ಎಂಬುವವರು, ಯುವಜನರಲ್ಲಿ ಜನಪ್ರಿಯವಾಗಿರುವ ಹೊಗೆರಹಿತ ತಂಬಾಕು ಉತ್ಪನ್ನದ ಜಾಹೀರಾತನ್ನು ಪ್ರದರ್ಶಿಸುವ ಹಿಂಭಾಗದ ಫಲಕದೊಂದಿಗೆ ಕೆಎಸ್‌ಆರ್‌ಟಿಸಿ ಬಸ್‌ನ ಫೋಟೋವನ್ನು X ನಲ್ಲಿ ಹಂಚಿಕೊಂಡಿದ್ದರು.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".