540
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರದಿಂದ ಎರಡು ದಿನಗಳ ಸೌದಿ ಅರೇಬಿಯಾ ಭೇಟಿ ನೀಡಲಿದ್ದು, ಇಂಧನ, ವ್ಯಾಪಾರ ಮತ್ತು ರಕ್ಷಣೆ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ವಿಸ್ತರಿಸುವತ್ತ ಗಮನ ಹರಿಸಲಿದ್ದಾರೆ.
ಪ್ರಧಾನಿ ಮೋದಿ ಏಪ್ರಿಲ್ 22 ಮತ್ತು 23ರಂದು ಸೌದಿ ಅರೇಬಿಯಾಕ್ಕೆ ಅಧಿಕೃತ ಭೇಟಿ ನೀಡುತ್ತಿದ್ದು, ಮೋದಿ ಸೌದಿ ಅರೇಬಿಯಾಕ್ಕೆ ನೀಡುವ ಮೂರನೇ ಭೇಟಿ ಇದಾಗಿದೆ.

ಮೋದಿ ಮತ್ತು ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ನಡುವಿನ ದ್ವಿಪಕ್ಷೀಯ ಮಾತುಕತೆಯ ನಂತರ ಉಭಯ ನಾಯಕರು ಹಲವು ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ.