Home ಅಪರಾಧಪರೀಕ್ಷೆ ಬರೆಯಲು ಜನಿವಾರ ತೆಗೆಸಿದವರು ಅಮಾನತ್ತು

ಪರೀಕ್ಷೆ ಬರೆಯಲು ಜನಿವಾರ ತೆಗೆಸಿದವರು ಅಮಾನತ್ತು

by Editor
0 comments

ಬೀದರ : ನಗರದ ಸಾಯಿ ಸ್ಫೂರ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಸುಚಿವ್ರತ್‌ಗೆ ಜನಿವಾರ ತೆಗೆಯಲು ಬಲವಂತ ಮಾಡಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದೆ ಕರ್ತವ್ಯ ಲೋಪ ಎಸಗಿದ್ದ ಕಾಲೇಜಿನ ಪ್ರಾಂಶುಪಾಲ ಮತ್ತು ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ.
ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿತ್ತು. ಪ್ರಕರಣದ ಬಗ್ಗೆ ತನಿಖೆ ನಡೆಸಿ 24 ಗಂಟೆಯೊಳಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಉಪ ವಿಭಾಗಾಧಿಕಾರಿಗೆ ಸೂಚನೆ ನೀಡಿದ್ದರು. ಅವರ ವರದಿ ಆಧರಿಸಿ ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸಿದ್ದ ಬೀದರ ಜಿಲ್ಲಾಧಿಕಾರಿ ಈ ಘಟನೆಯಲ್ಲಿ ಅಧಿಕಾರಿಗಳದ್ದೇ ತಪ್ಪು ಎಂದು ವರದಿ ಸಲ್ಲಿಸಿದ್ದರು.

ಅದರ ಬೆನ್ನಲ್ಲೇ ಕರ್ತವ್ಯಲೋಪ ಎಸಗಿದ ಹಿನ್ನೆಲೆಯಲ್ಲಿ ಈ ಘಟನೆ ನಡೆದ ಬೀದರಿ​ನ ಖಾಸಗಿ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ಬಿರಾದರ ಮತ್ತು ಎಸ್‌ಡಿಎ ಸತೀಶ ಪವಾರ ಅವರನ್ನು ಅಮಾನತು ಮಾಡುವಂತೆ ಆದೇಶಿಸಲಾಗಿತ್ತು.

ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಬೀದರ್‌ ಜಿಲ್ಲಾಧಿಕಾರಿ ಅಮಾನತು ಮಾಡುವಂತೆ ಸೂಚಿಸಿದ್ದರು. ಜಿಲ್ಲಾಧಿಕಾರಿಯಿಂದ ಅಮಾನತು ಆದೇಶದ ಬೆನ್ನಲ್ಲೇ ಕಾಲೇಜು ಆಡಳಿತ ಮಂಡಳಿ ಈ ಇಬ್ಬರನ್ನು ಕೆಲಸದಿಂದ ವಜಾ ಮಾಡಿದೆ.

ಜನಿವಾರ ತೆಗೆಸುವಂತೆ ನಿಯಮದಲ್ಲಿ ಇಲ್ಲದಿದ್ದರೂ ಸುಚಿವ್ರತ್ ಕುಲಕರ್ಣಿ ಎಂಬ ವಿದ್ಯಾರ್ಥಿಗೆ 17ರಂದು ಜನಿವಾರ ತೆಗೆಯುವಂತೆ ಒತ್ತಾಯಿಸಿ, ಆತ ಒಪ್ಪದಿದ್ದಾಗ ಕೆ-ಸಿಇಟಿ ಗಣಿತ ವಿಷಯದ ಪರೀಕ್ಷೆ ಬರೆಯಲು ಅವಕಾಶ ನೀಡದೆ ಮನೆಗೆ ಕಳುಹಿಸಿರುವುದು ಗಂಭೀರ ಸ್ವರೂಪದ ಅಪರಾಧವಾಗಿದ್ದು, ಇದಕ್ಕೆ ಕಾರಣರಾದ ಕಾಲೇಜಿನ ಪ್ರಾಂಶುಪಾಲ ಹಾಗೂ ಪರೀಕ್ಷಾ ಕೇಂದ್ರದ ಉಪ ಮುಖ್ಯ ಅಧೀಕ್ಷಕ ಚಂದ್ರಶೇಖರ ಬಿರಾದಾರ ಹಾಗೂ ಪ್ರಿಸ್ಕಿಂಗ್ ಸಿಬ್ಬಂದಿ ದ್ವಿತೀಯ ದರ್ಜೆ ಸಹಾಯಕ ಸತೀಶ ಪವಾರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಲಸದಿಂದ ವಜಾಗೊಳಿಸಿ ಸಾಯಿ ಸ್ಫೂರ್ತಿ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".