Home ಜಿಲ್ಲೆರಥಸಪ್ತಮಿ ಪ್ರಯುಕ್ತ ವನ್ನಳ್ಳಿ ಬೀಚ್‌ನಲ್ಲಿ ಸಾಮೂಹಿಕ ಯೋಗಾಭ್ಯಾಸ

ರಥಸಪ್ತಮಿ ಪ್ರಯುಕ್ತ ವನ್ನಳ್ಳಿ ಬೀಚ್‌ನಲ್ಲಿ ಸಾಮೂಹಿಕ ಯೋಗಾಭ್ಯಾಸ

by News Desk
0 comments

ಕುಮಟಾ : ರವಿವಾರ ರಥಸಪ್ತಮಿ ಹಬ್ಬದ ಪ್ರಯುಕ್ತ, ಕುಮಟಾ ಡಿಪೋ ಬಳಿ ಕಾರ್ಯನಿರ್ವಹಿಸುತ್ತಿರುವ ಪತಂಜಲಿ ಯೋಗ ಸಮಿತಿಯ ವತಿಯಿಂದ ಕುಮಟಾದ ವನ್ನಳ್ಳಿ ಬೀಚ್‌ನಲ್ಲಿ ಮುಂಜಾನೆ 5.30ಕ್ಕೆ ವಿಶೇಷ ಯೋಗ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಂಗವಾಗಿ ಮೊದಲು ಹವನವನ್ನು ನೆರವೇರಿಸಿ, ನಂತರ ಸಮಿತಿಯ ಎಲ್ಲ ಯೋಗಾಭ್ಯರ್ಥಿಗಳು 108 ಸಾಮೂಹಿಕ ಸೂರ್ಯನಮಸ್ಕಾರಗಳನ್ನು ಮಾಡುವ ಮೂಲಕ ರಥಸಪ್ತಮಿಯನ್ನು ಭಕ್ತಿಭಾವದಿಂದ ಆಚರಿಸಿದರು. ಈ ಸಂದರ್ಭದಲ್ಲಿ ಯೋಗವು ದೈಹಿಕ ಶಕ್ತಿ, ನಮ್ಯತೆ, ಮಾನಸಿಕ ಶಾಂತಿ ಹಾಗೂ ಒಟ್ಟಾರೆ ಆರೋಗ್ಯವನ್ನು ಸುಧಾರಿಸುವ ಸಮಗ್ರ ಜೀವನಶೈಲಿಯಾಗಿದೆ ಎಂಬುದನ್ನು ವಿವರಿಸಲಾಯಿತು.

ಯೋಗಾಭ್ಯಾಸವು ಒತ್ತಡವನ್ನು ಕಡಿಮೆ ಮಾಡುವುದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಹಾಗೂ ಏಕಾಗ್ರತೆಯನ್ನು ವೃದ್ಧಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಿಯಮಿತ ಯೋಗಾಭ್ಯಾಸದಿಂದ ದೀರ್ಘಕಾಲದ ಕಾಯಿಲೆಗಳನ್ನು ತಡೆದು ದೈಹಿಕ–ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು. ಕುಮಟಾದ ಸರ್ವ ಜನರು ಪ್ರತಿನಿತ್ಯ ಯೋಗಾಭ್ಯಾಸದಲ್ಲಿ ತೊಡಗಿಸಿಕೊಳ್ಳುವಂತೆ ಹಾಗೂ ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗುವಂತೆ ಪ್ರೇರಣೆ ನೀಡಲಾಯಿತು.

ಈ ಕಾರ್ಯಕ್ರಮವು ಜಿಲ್ಲಾ ಪ್ರಭಾರಿ ನಾಗೇಂದ್ರ ಭಟ್, ತಾಲೂಕಾ ಪ್ರಭಾರಿ ದಿನೇಶ್ ರೇವಣಕರ್ ಹಾಗೂ ವಿನಾಯಕ ಭಟ್ ಅವರ ಉಪಸ್ಥಿತಿಯಲ್ಲಿ ಯಶಸ್ವಿಯಾಗಿ ನಡೆಯಿತು.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".