Home ಜಿಲ್ಲೆಜಿ.ಎಸ್.ಎಸ್. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದ ಸಂಧ್ಯಾ ವಿನಾಯಕ

ಜಿ.ಎಸ್.ಎಸ್. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದ ಸಂಧ್ಯಾ ವಿನಾಯಕ

by News Desk
0 comments

ಕುಮಟಾ: ರಾಷ್ಟ್ರಕವಿ ಡಾ.ಜಿ.ಎಸ್.ಎಸ್. ಪ್ರತಿಷ್ಠಾನ (ರಿ.) ಶಿವಮೊಗ್ಗ ವತಿಯಿಂದ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಕುಮಟಾದ ಕೂಜಳ್ಳಿಯ ಸಂಧ್ಯಾ ವಿನಾಯಕ ಹೆಗಡೆ ದ್ವಿತೀಯ ಬಹುಮಾನವನ್ನು ಪಡೆದಿದ್ದು, ಬಹುಮಾನ ಮತ್ತು ನಗದು ಪುರಸ್ಕಾರವನ್ನು ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡ್ಯೂರಪ್ಪ ಅವರಿಂದ ಸ್ವೀಕರಿಸಿದರು. ಈ ಸ್ಪರ್ಧೆಯಲ್ಲಿ ಕರ್ನಾಟಕದ ವಿವಿಧ ಭಾಗದ 83 ಸ್ಪರ್ಧಾಳುಗಳು ಭಾಗವಹಿಸಿದ್ದರು.

ಸಿ.ಎ. ವಿನಾಯಕ ಹೆಗಡೆ ಅವರ ಧರ್ಮಪತ್ನಿಯಾದ ಇವರು ಪತಿಯ ಕಚೇರಿ ಕೆಲಸಕ್ಕೆ ಸಹಕರಿಸುತ್ತಲೇ ಸಂಗೀತ ಸಾಧನೆಯನ್ನೂ ಮಾಡುತ್ತಿದ್ದಾರೆ. ಇವರು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿದ್ದು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುವುದಕ್ಕೆ ಅವರ ಸಂಗೀತದ ಗುರುಗಳಾದ ಸ್ವರಾತ್ಮ ಗುರುಕುಲದ ಪ್ರಾಚಾರ್ಯ ಡಾ. ಹರೀಶ ಹೆಗಡೆ ಹಾಗೂ ಅವರ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಯು ಟ್ಯೂಬ್ ನಲ್ಲಿ ಇವರು ಹಾಡಿದ ಅನೇಕ ಭಜನೆ, ಭಕ್ತಿ ಗೀತೆ ಹಾಗೂ ಭಾವಗೀತೆಗಳು ಈಗಾಗಲೇ ಅಪಾರ ಜನಮೆಚ್ಚುಗೆ ಪಡೆದಿರುವುದನ್ನು ಸ್ಮರಿಸಬಹುದು.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".