231
ಕುಮಟಾ : ಇಲ್ಲಿನ ಕೊಂಕಣ ಎಜುಕೇಶನ್ ಟ್ರಸ್ಟ್ ಹಾಗೂ ಮಂಗಳೂರಿನ ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಸರಸ್ವತಿ ಪಿ.ಯು ಕಾಲೇಜಿನ ಪ್ರಾಂಶುಪಾಲರಾಗಿ ಖ್ಯಾತ ಆಂಗ್ಲಭಾಷಾ ಉಪನ್ಯಾಸಕ ಪ್ರೊ. ಜೆ. ಎಸ್. ಹೆಗಡೆ ಕಣ್ಣಿ ಅವರು ಸೋಮವಾರ ಪದಗ್ರಹಣ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯದ ಹೆಸರಾಂತ ಶಿಕ್ಷಣ ತಜ್ಞ ಸುರೇಶ್ ಕುಲಕರ್ಣಿ, ಕೊಂಕಣ ಎಜುಕೇಶನ್ ಟ್ರಸ್ಟ್ ಉಪಾಧ್ಯಕ್ಷ ರಮೇಶ ಪ್ರಭು, ವಿಧಾತ್ರಿ ಅಕಾಡೆಮಿಯ ಸಹ ಸಂಸ್ಥಾಪಕ ಗುರುರಾಜ ಶೆಟ್ಟಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು, ಶುಭಕೋರಿದರು.

ಪ್ರೊ. ಜಿ.ಎಸ್ ಹೆಗಡೆ ಕಣ್ಣಿಯವರು ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದು, ಮಂಗಳೂರು, ಮೂಡಬಿದ್ರೆ ಹಾಗೂ ಗುರುವಾಯೂರನಕೆರೆಯ ಪ್ರಸಿದ್ಧ ಶಿಕ್ಷಣ ಸಂಸ್ಥೆಗಳಲ್ಲಿ ಆಂಗ್ಲಭಾಷಾ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ತಮ್ಮದೇ ಆದ ಖ್ಯಾತಿಯನ್ನು ಗಳಿಸಿದ್ದಾರೆ.
ಹೊಸ ಜವಾಬ್ದಾರಿಯನ್ನು ಸ್ವೀಕರಿಸಿರುವ ಅವರು ಕಾಲೇಜಿನ ಶೈಕ್ಷಣಿಕ ಮಟ್ಟವನ್ನು ಇನ್ನಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.