Home ಜಿಲ್ಲೆCET ಪರೀಕ್ಷೆಗೆ ವಿದ್ಯಾರ್ಥಿಗಳಿಗೆ AITM ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಫಜ್ಲುರ್ ರಹಮಾನ್ ರಿಂದ ಶುಭಾಶಯ

CET ಪರೀಕ್ಷೆಗೆ ವಿದ್ಯಾರ್ಥಿಗಳಿಗೆ AITM ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಫಜ್ಲುರ್ ರಹಮಾನ್ ರಿಂದ ಶುಭಾಶಯ

by News Desk
0 comments

ಭಟ್ಕಳ: ಮುಂದಿನ CET ಪರೀಕ್ಷೆಯನ್ನು ಎದುರಿಸಲು ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳಿಗೆ AITM ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಫಜ್ಲುರ್ ರಹಮಾನ್ ಅವರು ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿದ ಅವರು, CET ಪರೀಕ್ಷೆ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮಹತ್ವದ ಹಂತವಾಗಿದ್ದು, ಪರಿಶ್ರಮ, ನಿಷ್ಠೆ ಹಾಗೂ ಆತ್ಮವಿಶ್ವಾಸವು ಯಶಸ್ಸಿಗೆ ದಾರಿಯಾಗುತ್ತದೆ ಎಂದು ತಿಳಿಸಿದ್ದಾರೆ. ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಾಂತ ಮನೋಭಾವವನ್ನು ಕಾಪಾಡಿಕೊಂಡು, ಏಕಾಗ್ರತೆಯಿಂದ ಉತ್ತರಿಸುವಂತೆ ಅವರು ಸಲಹೆ ನೀಡಿದ್ದಾರೆ.

ಯಶಸ್ಸು ಫಲಿತಾಂಶದಲ್ಲೇ ಅಲ್ಲ, ಪರೀಕ್ಷೆಗೆ ಹಾಕಿದ ಪರಿಶ್ರಮದಲ್ಲೂ ಇದೆ ಎಂಬುದನ್ನು ವಿದ್ಯಾರ್ಥಿಗಳು ಮನಗಾಣಬೇಕು ಎಂದು ಹೇಳಿದರು. ತಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟು ಉತ್ತಮ ಪ್ರದರ್ಶನ ನೀಡುವಂತೆ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಎಲ್ಲ ವಿದ್ಯಾರ್ಥಿಗಳು ತಮ್ಮ ಶ್ರೇಷ್ಠ ಸಾಮರ್ಥ್ಯವನ್ನು ಪ್ರದರ್ಶಿಸಿ ಉತ್ತಮ ಫಲಿತಾಂಶಗಳನ್ನು ಸಾಧಿಸಲಿ ಎಂದು ಹಾರೈಸಿದ ಅವರು, CET ಪರೀಕ್ಷೆಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".