ಕುಮಟಾ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧಾರಣ ಅಂಕಗಳನ್ನು ಪಡೆದಿದ್ದೇವೆ ಎಂದು ನಿರಾಶರಾಗುವ ವಿದ್ಯಾರ್ಥಿಗಳಿಗೆ ಹೊಸ ಭರವಸೆಯನ್ನು ಮೂಡಿಸುತ್ತಿದೆ ಕುಮಟಾದ ವಿದ್ಯಾಗಿರಿಯಲ್ಲಿರುವ ಸರಸ್ವತಿ ಪಿ.ಯು ಕಾಲೇಜು. ಮಂಗಳೂರಿನ ವಿಧಾತ್ರಿ ಅಕಾಡೆಮಿ ಹಾಗೂ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಶಿಕ್ಷಣ ಸಂಸ್ಥೆ, ವಿದ್ಯಾರ್ಥಿಗಳ ಸಾಧನೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ದಿಸೆಯಲ್ಲಿ ಗಮನಾರ್ಹ ಕಾರ್ಯ ಮಾಡುತ್ತಿದೆ.
2020ರಿಂದ ಇಂದಿನವರೆಗೆ ರಾಜ್ಯ ಮಟ್ಟದಲ್ಲಿ ನಿರಂತರವಾಗಿ ರ್ಯಾಂಕ್‌ಗಳನ್ನು ಗಳಿಸಿರುವ ಈ ಕಾಲೇಜು, ಪ್ರತೀ ವರ್ಷವೂ ಶೇ.100 ಫಲಿತಾಂಶ ಸಾಧಿಸುತ್ತಿದ್ದು, NEET, JEE, KCET ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ವಿಶಿಷ್ಟ ಸಾಧನೆ ಮಾಡುತ್ತಿದ್ದಾರೆ. ಜನರ ಪ್ರೀತಿ, ವಿಶ್ವಾಸ ಮತ್ತು ನಿರಂತರ ಸಾಧನೆಯಿಂದಾಗಿ ಈ ಸಂಸ್ಥೆ ಉತ್ತರ ಕನ್ನಡ ಜಿಲ್ಲೆಯ ಜನನಂಬಿಕೆಯ ಶಿಕ್ಷಣ ಕೇಂದ್ರವಾಗಿ ಬೆಳೆದಿದೆ.

ಇತರೆ ಅನೇಕ ಕಾಲೇಜುಗಳಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶದ ಆಧಾರದಲ್ಲಿ ದಾಖಲಾತಿ ನೀಡಲಾಗುತ್ತಿದ್ದರೂ, ಸರಸ್ವತಿ ಪಿ.ಯು ಕಾಲೇಜಿನಲ್ಲಿ ಅಂತಹ ಯಾವುದೇ ಕಟ್ಟಳೆಗಳಿಲ್ಲ. ಸಾಧಾರಣ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೂ ವಿಜ್ಞಾನ ವಿಭಾಗದಲ್ಲಿ ಸಾಧನೆ ಮಾಡಲು ಅವಕಾಶ ನೀಡಲಾಗುತ್ತಿದ್ದು, ಅದಕ್ಕಾಗಿ ಅಗತ್ಯವಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.
ನುರಿತ ಉಪನ್ಯಾಸಕ ವೃಂದದವರು ವಿದ್ಯಾರ್ಥಿಗಳಿಗೆ ನಿರಂತರ ಮಾರ್ಗದರ್ಶನ ನೀಡುತ್ತಿದ್ದು, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ದತ್ತು ಯೋಜನೆಗಳಡಿ ವಿಶೇಷವಾಗಿ ಗಮನ ಹರಿಸಲಾಗುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಅವರಲ್ಲಿ ಆತ್ಮವಿಶ್ವಾಸ ಬೆಳೆಸಿ ಉತ್ತಮ ಸಾಧಕರನ್ನಾಗಿ ರೂಪಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ.
ಇಲ್ಲಿ ಕೇವಲ ಶೇ.50 ಅಂಕಗಳನ್ನು ಪಡೆದು ಪಿಯುಸಿಗೆ ದಾಖಲಾದ ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ಅನೇಕ ಉದಾಹರಣೆಗಳಿವೆ. ಹಾಗೆಯೇ ಶೇ.45ರಿಂದ 50ರ ನಡುವೆ ಅಂಕ ಪಡೆದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಡಿಸ್ಟಿಂಕ್ಷನ್ ಗಳಿಸಿರುವ ನೂರಾರು ಉದಾಹರಣೆಗಳು ಕಳೆದ ಆರು ವರ್ಷಗಳಲ್ಲಿ ಕಾಣಸಿಗುತ್ತದೆ.

ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಲ್ಲಿ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಈ ಕಾಲೇಜು ದೃಢವಾದ ಅಡಿಪಾಯ ಒದಗಿಸುತ್ತಿದೆ. ಈಗಾಗಲೇ ಅನೇಕ ವಿದ್ಯಾರ್ಥಿಗಳು ದಾಖಲಾತಿ ಪ್ರಕ್ರಿಯೆ ಆರಂಭಿಸಿದ್ದು, ಆಸಕ್ತರು ತಕ್ಷಣ (9972664155 / 9972663855 ) ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ವಿಧಾತ್ರಿ ಅಕಾಡೆಮಿಯ ಸಹ ಸಂಸ್ಥಾಪಕರಾದ ಗುರುರಾಜ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.