ಕುಮಟಾ : ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಹಾಗೂ ವಿಧಾತ್ರಿ ಅಕಾಡೆಮಿ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಕೆ. ಭಂಡಾರಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿಗೆ ಆಕಾಶವಾಣಿಯ ಮಾಜಿ ಉದ್ಘೋಷಕಿ ಹಾಗೂ ಪ್ರಸ್ತುತ ವಿಶ್ವಕೊಂಕಣಿ ಕೇಂದ್ರದ ಟ್ರಸ್ಟಿಯಾಗಿರುವ ಶಕುಂತಲಾ ಆರ್. ಕಿಣಿ ಅವರು ಭೇಟಿ ನೀಡಿ, ಕಾಲೇಜಿನ ಶೈಕ್ಷಣಿಕ ವಾತಾವರಣ, ಶಿಸ್ತು, ಮೌಲ್ಯಾಧಾರಿತ ಶಿಕ್ಷಣ ಹಾಗೂ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಕೈಗೊಂಡಿರುವ ವಿವಿಧ ಚಟುವಟಿಕೆಗಳನ್ನು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಲೇಜಿನ ಶೈಕ್ಷಣಿಕ ಕಾರ್ಯವೈಖರಿ, ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಗುಣಮಟ್ಟದ ಶಿಕ್ಷಣ, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಸಮನ್ವಯ ಮತ್ತು ಸಂಸ್ಥೆಯ ಶಿಕ್ಷಣದ ಬದ್ಧತೆಯನ್ನು ಅವಲೋಕಿಸಿದ ಅವರು, ಇಂತಹ ಶಿಕ್ಷಣ ಸಂಸ್ಥೆಗಳು ಸಮಾಜಕ್ಕೆ ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಉಳ್ಳಾಲದ ರಾಘವೇಂದ್ರ ಕಿಣಿ, ಖ್ಯಾತ ಕಲಾವಿದ ಪ್ರಕಾಶ ನಾಯಕ್ ಹಾಗೂ ಕುಸುಮಾ ನಾಯಕ್ ಉಪಸ್ಥಿತರಿದ್ದರು. ಸಂಸ್ಥೆಯ ಪರವಾಗಿ ಗುರುರಾಜ ಶೆಟ್ಟಿ ಹಾಗೂ ಕಾಲೇಜಿನ ಪ್ರಾಚಾರ್ಯ ಜಿ. ಎಸ್. ಹೆಗಡೆ ಕಣ್ಣಿ ಅವರು ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿ, ಶಾಲು ಹೊದಿಸಿ ಸನ್ಮಾನಿಸಿದರು.
ಭೇಟಿಯ ವೇಳೆ ಕಾಲೇಜಿನ ಶೈಕ್ಷಣಿಕ ಸಾಧನೆಗಳು, ವಿದ್ಯಾರ್ಥಿಗಳ ಪ್ರತಿಭಾ ವಿಕಸನಕ್ಕಾಗಿ ಕೈಗೊಂಡಿರುವ ವಿಶೇಷ ಕಾರ್ಯಕ್ರಮಗಳು ಹಾಗೂ ಭವಿಷ್ಯದ ಯೋಜನೆಗಳ ಕುರಿತು ಗಣ್ಯರೊಂದಿಗೆ ಚರ್ಚೆ ನಡೆಯಿತು.