Home ಮಾಹಿತಿಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ

ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ

by News Desk
0 comments

ಕುಮಟಾ, ಜುಲೈ 1: ಕರಾವಳಿ ಕರ್ನಾಟಕದಲ್ಲಿ ಮಳೆಯ ಅಬ್ಬರ ಮತ್ತೆ ತೀವ್ರಗೊಳ್ಳುವ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಜುಲೈ 2 ಹಾಗೂ ಜುಲೈ 5ರಿಂದ 7ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಅವಧಿಯಲ್ಲಿ ಭಾರೀ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತಗಳು ಮನವಿ ಮಾಡಿವೆ.

ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ನಿರೀಕ್ಷೆಯಿದ್ದು, ನದಿ, ಕೆರೆ ಹಾಗೂ ಸಮುದ್ರ ತೀರಗಳಿಗೆ ಸಾರ್ವಜನಿಕರು ಮತ್ತು ಪ್ರವಾಸಿಗರು ತೆರಳದಂತೆ ಸೂಚಿಸಲಾಗಿದೆ. ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಮಳೆ, ಗುಡುಗು ಹಾಗೂ ಸಿಡಿಲಿನ ಸಾಧ್ಯತೆ ಇರುವುದರಿಂದ ರೈತರು ಕೃಷಿ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ಸಲಹೆ ನೀಡಲಾಗಿದೆ. ಸಾರ್ವಜನಿಕರು ವಿದ್ಯುತ್ ಕಂಬಗಳು, ಅಪಾಯಕಾರಿ ಮರಗಳು ಹಾಗೂ ಶಿಥಿಲಗೊಂಡ ಕಟ್ಟಡಗಳ ಬಳಿ ಆಶ್ರಯ ಪಡೆಯಬಾರದು. ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಪರಿಸ್ಥಿತಿಯನ್ನು ಗಮನಿಸಿ ಅಗತ್ಯವಿದ್ದಲ್ಲಿ ಸುರಕ್ಷಿತ ಸ್ಥಳಗಳಿಗೆ ಅಥವಾ ತಾಲೂಕು ಆಡಳಿತ ತೆರೆಯುವ ಕಾಳಜಿ ಕೇಂದ್ರಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚಿಸಿದೆ.

ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 2ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶ ಹೊರಡಿಸಿದ್ದು, ಹವಾಮಾನ ಪರಿಸ್ಥಿತಿಯನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿತ ಇಲಾಖೆಗಳಿಗೆ ಸೂಚನೆ ನೀಡಿದ್ದಾರೆ.

You may also like

Leave a Comment

Latest news
ಮಣ್ಣಿಗೆ ಜೀವ ನೀಡುವ ಖ್ಯಾತ ಕಲಾವಿದರು ಜಿ. ಡಿ ಭಟ್ ಕೆಕ್ಕಾರ.... ಹೊಳೆಯುವ ಪಾತ್ರೆಗಳ ಹಿಂದೆ ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳಬೇಡಿ: ರಾಘವೇಶ್ವರ ಶ್ರೀ ಕ್ರೀಡಾಕೂಟದಲ್ಲಿ ಮಿಂಚಿದ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿನಿಯರು; ಜಿಲ್ಲಾ ಮಟ್ಟಕ್ಕೆ ಆಯ್ಕೆ ಸಂತೆಯಲ್ಲಿ ಕಳೆದುಕೊಂಡ 8 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಪತ್ತೆ ಸ್ವಾರ್ಥದಾಚೆ ಸಮಾಜದ ಬಗ್ಗೆ ಚಿಂತಿಸಿದಾಗಲೇ ರಾಷ್ಟ್ರದ ಅಭ್ಯುದಯ ಸಾಧ್ಯ: ವಿನೋದ ಪ್ರಭು ಬೆಳಗಿನ ಜಾವ ದನ ಕದ್ದು ಪರಾರಿಯಾದವರು ಅರೆಸ್ಟ್..! AITM ನಲ್ಲಿ ಸ್ಮಾರ್ಟ ಇಂಡಿಯಾ Hackthon AITMನಲ್ಲಿ IEEE ವಿದ್ಯಾರ್ಥಿ ಶಾಖೆ, IJESTM ಜರ್ನಲ್ ಉದ್ಘಾಟನೆ ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು.