Home ಜಿಲ್ಲೆಉಮೇಶ ಮುಂಡಳ್ಳಿ ಗೆ ಕೇರಳ ಕಾಸರಗೋಡು ಕನ್ನಡ ಭವನದ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ ಪ್ರಧಾನ

ಉಮೇಶ ಮುಂಡಳ್ಳಿ ಗೆ ಕೇರಳ ಕಾಸರಗೋಡು ಕನ್ನಡ ಭವನದ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ ಪ್ರಧಾನ

by Editor
0 comments

ಕೇರಳ ಕಾಸರಗೊಡು : ಉತ್ತರ ಕನ್ನಡ ಜಿಲ್ಲೆಯ ಪ್ರತಿಭಾನ್ವಿತ ಲೇಖಕರು ಗಾಯಕರಾದ ಉಮೇಶ ಮುಂಡಳ್ಳಿ ಅವರಿಗೆ ಕೇರಳ ಕಾಸರಗೋಡು ಕನ್ನಡ ಭವನದ ೩೦೨೬ ನೇ ಸಾಲಿನ ಪ್ರತಿಷ್ಠಿತ ಅಂತರ್ ರಾಜ್ಯ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ ರವಿವಾರ ಪ್ರಧಾನ ಮಾಡಲಾಯಿತು.

ಕಾಸರಗೋಡು ಕನ್ನಡ ಭವನದಲ್ಲಿ ರವಿವಾರ ನಡೆದ ಕನ್ನಡ ಭವನ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಕೇರಳ ಹಾಗೂ ಕರ್ನಾಟಕದ ಅನೇಕ ಸಾಧಕರೊಡನೆ ಸಾಹಿತ್ಯ ಸಂಗೀತ ಮತ್ತು ಕಲಾ ಕ್ಷೇತ್ರದಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ಉಮೇಶ ಮುಂಡಳ್ಳಿ ಭಟ್ಕಳ ಇವರಿಗೂ ಪ್ರಶಸ್ತಿ ಪ್ರಧಾನ ಮಾಡಲಾಯಿತು.

 

ಕನ್ನಡದ ಭವನದ ಸಂಸ್ಥಾಪಕ ಅಧ್ಯಕ್ಷ ಡಾ ವಾಮನ್ ರಾವ್ ಬೇಕಲ್ ಹಾಗೂ ಚುಟುಕು ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ಡಾ.ಎಂ.ಜಿ.ಆರ್.ಅರಸು ಮೈಸೂರು ಅವರು ಶ್ರೀ ಕೃಷ್ಣದೇವರಾಯ ವೇದಿಕೆಯಲ್ಲಿ ಗಣ್ಯರ ಸಮ್ಮುಖದಲ್ಲಿ ಮುಂಡಳ್ಳಿ ಅವರನ್ನು ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕೌಸ್ತುಬ ಪತ್ರಿಕೆ ಸಂಪಾದಕರಾದ ರತ್ನಾ ಹಾಲಪ್ಪ ಗೌಡ ಮೈಸೂರು, ಕನ್ನಡ ಭವನದ ಕಾರ್ಯದರ್ಶಿ ವಸಂತ ಕೆರೆಮನೆ,ಡಾ.ಕೆ.ಎಸ್.ವೆಂಕಟರಮಣ ಹೊಳ್ಳೆ, ಸಂಧ್ಯಾರಾಣಿ ಬೇಕಲ್,ಅರಿಬೈಲು ಗೋಪಾಲ ಶೆಟ್ಟಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".