ಗೋಕರ್ಣ ಶ್ರೀಮಹಾಬಲೇಶ್ವರ ದೇವಾಲಯವನ್ನು ಸರ್ಕಾರಕ್ಕೆ ವಹಿಸುವ ಕುರಿತು ರಾಜ್ಯ ಉಚ್ಚ ನ್ಯಾಯಾಲಯ ನೀಡಿದ್ದ ಆದೇಶವನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದ್ದು, ಇಂದು ಶ್ರೀಮಠದ ಅರ್ಜಿಯನ್ನು ಮಾನ್ಯ ಮಾಡಿದ ಘನ ನ್ಯಾಯಾಲಯ ರಾಜ್ಯ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶವನ್ನು ಮುಂದಿನ ಆದೇಶದವರೆಗೂ ಮುಂದುವರಿಸುವಂತೆ ಸೂಚಿಸಿದೆ. ಇದರಿಂದಾಗಿ ಶ್ರೀಮಠಕ್ಕಿರುವ ದೇವಾಲಯದ ನಿರ್ವಹಣಾಧಿಕಾರ ಆಬಾಧಿತವಾಗಿ ಮುಂದುವರಿಯಲಿದೆ.

ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನು ಸರ್ಕಾರಕ್ಕೆ ವಹಿಸುವ ಕುರಿತು ರಾಜ್ಯ ಉಚ್ಚ ನ್ಯಾಯಾಲಯ ಕಳೆದ ಆಗಸ್ಟ್ 10 ರಂದು ತೀರ್ಪು ನೀಡಿತ್ತು ಹಾಗೂ ಅದೇ ದಿನ ಮಧ್ಯಂತರ ಆದೇಶವನ್ನು ನೀಡಿ ; ತೀರ್ಪಿನಲ್ಲಿ ಉಲ್ಲೇಖಿಸಿರುವ ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಸೆಪ್ಟೆಂಬರ್ 10 ನಂತರ ಕಾರ್ಯ ನಿರ್ವಹಿಸಲಿದೆ, ಸೆಪ್ಟೆಂಬರ್ 10 ವರೆಗೆ ಶ್ರೀಮಠವೇ ಆಡಳಿತವನ್ನು ಸಡೆಸಲಿದೆ ಎಂದು ಮಧ್ಯಂತರ ಆದೇಶದಲ್ಲಿ ಹೇಳಿತ್ತು.

RELATED ARTICLES  ಪೇಟೆಗೆ ಲಗ್ಗೆ ಇಟ್ಟಿದೆ ತರಹೇವಾರಿ ಹಣತೆ, ದೀಪಗಳ ಹಬ್ಬಕ್ಕೆ ಸಿದ್ಧವಾಗುತ್ತಿದ್ದಾರೆ ಜನರು

ಇಂದು ಈ ಪ್ರಕರಣದ ಮೇಲ್ಮನವಿಯ ವಿಚಾರಣೆ ಸರ್ವೋಚ್ಛ ನ್ಯಾಯಾಲಯದಲ್ಲಿ ನಡೆದಿದ್ದು, ಶ್ರೀಮಠದ ಅರ್ಜಿಯನ್ನು ಮಾನ್ಯ ಮಾಡಿ, ಪ್ರತಿವಾದಿಗಳಿಗೆ ನೋಟೀಸ್ ಜಾರಿ ಮಾಡಿದೆ. ರಾಜ್ಯ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶವನ್ನು ಮುಂದುವರಿಸುವಂತೆ ಸೂಚಿಸಿದೆ. ಅಂದರೆ ಸೆಪ್ಟೆಂಬರ್ 10 ರ ನಂತರ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಅಧಿಕಾರ ವಹಿಸಿಕೊಳ್ಳುವುದನ್ನು ಮುಂದೂಡಿದಂತಾಗಿದ್ದು, ಸುಪ್ರೀಂ ಕೋರ್ಟಿನಲ್ಲಿ ತೀರ್ಮಾನ ಆಗುವವರೆಗೂ ದೇವಾಲಯದ ಆಡಳಿತವನ್ನು ಶ್ರೀಮಠವೇ ನಿರ್ವಹಿಸಲಿದೆ ಎಂದು ಶ್ರೀ ಮಠದ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

RELATED ARTICLES  ಸಚಿವ ಅನಂತಕುಮಾರ್ ನಿಧನಕ್ಕೆ ಹವ್ಯಕ ಮಹಾಸಭೆಯ ಸಂತಾಪ