ಕುಮಟಾ :-ಏರುತ್ತಿರುವ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯಲು ಸೆ.10 ರಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕರೆಯ ಮೆರೆಗೆ ಕುಮಟಾ ಬಂದ್‌ಗೆ ಕರೆ ನೀಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಎಲ್.ನಾಯ್ಕ ತಿಳಿಸಿದ್ದಾರೆ.
ಪೆಟ್ರೋಲಿಯಂ ಉತ್ಪನ್ನಗಳ ದರ ಅತೀ ಏರಿಕೆ ಕಂಡ ಹಿನ್ನೆಲೆಯಲ್ಲಿ ಜನಸಾಮಾನ್ಯರು ತತ್ತರಿಸುವಂತಾಗಿದೆ. ಭವಿಷ್ಯದಲ್ಲಿ ಇನ್ನೂ ಏರಿಕೆ ಕಾಣುವ ಲಕ್ಷಣ ಕಂಡು ಬರುತ್ತಿದ್ದು. ಇದರಿಂದಾಗಿ ಸಾರಿಗೆ ದರ ಎರಿಕೆಯಾಗಿರುವುದಲ್ಲದೇ ವಾಣಿಜ್ಯ ವ್ಯವಹಾರಗಳು ತೀವ್ರವಾಗಿ ಏರು ಮುಖದಲ್ಲಿ ಸಾಗುವಂತಾಗಿ ದೇಶದ ಆರ್ಥಿಕ ಸ್ಥಿತಿ ಮೇಲೆ ವ್ಯತಿರಿಕ್ತ ಪರಿಣಾಮ ಉಂಟುಮಾಡಿದೆ ಎಂದಿದ್ದಾರೆ.
ಇದರಿಂದುಂಟಾದ ಹಣದುಬ್ಬರ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಬಂದ್‌ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದ ಎಲ್ಲ ವಾಣಿಜ್ಯ ವ್ಯವಹಾರ ಸ್ಥಗಿತಗೊಳಿಸಿ, ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿ, ಲಾರಿ, ಆಟೋ ಚಾಲಕರು ಸೇರಿದಂತೆ ಪ್ರತಿಯೊಬ್ಬರೂ ಬಂದ್ ಕರೆಗೆ ಬೆಂಬಲಿಸುವಂತೆ ಅವರು ವಿನಂತಿಸಿದ್ದಾರೆ.