ಮಂಗಳೂರು: ಶ್ರೀ ಭಾರತೀ ಕಾಲೇಜು ಮತ್ತು ತುಳು ಸಾಹಿತ್ಯ ಅಕಾಡೆಮಿ, ಮಂಗಳೂರು ಇವರ ಸಹಭಾಗಿತ್ವದಲ್ಲಿ ಸಪ್ಟೆಂಬರ್ 11 ಮಂಗಳವಾರದಂದು ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ *”ಉದಿಪು- 2018″* ಎಂಬ ಸಾಂಸ್ಕ್ರತಿಕ ಕಾರ್ಯಕ್ರಮ ನಂತೂರಿನ ಶ್ರೀಭಾರತೀ ಕಾಲೇಜಿನಲ್ಲಿ ಜರುಗಲಿದೆ.

ಕಾರ್ಯಕ್ರಮದ ವಿವರ:-
ಕಾರ್ಯಕ್ರಮವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಸ್ ವಿ ಭಂಡಾರಿ ವಹಿಸಿಕೊಳ್ಳಲಿದ್ದಾರೆ. ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ನಳೀನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅದೇ ದಿನ ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಖ್ಯಾತ ತುಳು ಚಲನಚಿತ್ರ ಕಲಾವಿದ ಅರವಿಂದ ಬೋಳಾರ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

RELATED ARTICLES  ಪ್ರೋತ್ಸಾಹಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

*ವರದಿ: ಎಂ ಎಸ್ ಶರತ್ ಮೂಡ್ಕಣಿ*