ಶಿವಮೊಗ್ಗ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉರುಳಲಿದೆ ಎಂದು ಹಲವು ವದಂತಿಗಳು ಹಬ್ಬಿದ ಬೆನ್ನಲ್ಲೇ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ದೇವಾಲಯಕ್ಕೆ ಭೇಟಿ ನೀಡಿದ್ದಾಗಿ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಉರುಳಿಸಲು ಕೆಲವು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ಹಾಗಾಗಿ ಸಮ್ಮಿಶ್ರ ಸರ್ಕಾರ ಉಳಿಸಲು ದೇವರ ಅನುಗ್ರಹ, ಗುರುಗಳ ಅನುಗ್ರಹ ಪಡೆಯಲು ದೇವಸ್ಥಾನಕ್ಕೆ ಹೋಗಿದ್ದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

RELATED ARTICLES  ಕ್ಯಾನ್ಸರ್ ನಿಂದ ಬಳಲುತ್ತಿರುವ ಪುಟ್ಟ ಕುವರಿ ರಿತಿ ಪ್ರಸಾದ್ ಜೈನ್ ಗೆ ಬೇಕಿದೆ ನೆರವು.

ಮುಂದುವರೆದು ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿ ಸಿಎಂ ಕುಮಾರಸ್ವಾಮಿ ಅವರು ರೈತರ 48 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಸಹಕಾರ ಪಡೆದು ಸಾಲ ಮನ್ನಾ ಮಾಡಲಾಗಿದೆ. ಇಷ್ಟು ದೊಡ್ಡ ಮೊತ್ತದ ಸಾಲ ಮನ್ನಾ ಮಾಡಿದಾಗ ರಾಜ್ಯದ ಅಭಿವೃದ್ಧಿ ಕುಂಠಿತವಾಗಬಾರದು. ಅದನ್ನು ಸರಿದೂಗಿಸಿಕೊಂಡು ಹೋಗಬೇಕು ಎಂದು ಹೇಳಿದ ದೇವೇಗೌಡರು, ರಾಜ್ಯದಲ್ಲಿ 14 ಗಂಟೆಗಳ ಕಾಲ ಜನತಾ ದರ್ಶನ ಮಾಡಲು ಮುಖ್ಯಮಂತ್ರಿಯಿಂದ ಸಾಧ್ಯವಿಲ್ಲ. ಆ ಕೆಲಸವನ್ನು ಕುಮಾರಸ್ವಾಮಿಯವರು ಮಾಡುತ್ತಿದ್ದಾರೆ ಎಂದು ದೇವೇಗೌಡರು ಹೇಳಿದರು.

RELATED ARTICLES  ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಕಂಟೇನರ್ ಪಲ್ಟಿ.