ನವದೆಹಲಿ: ಸೆ.19 ರಂದು ತ್ರಿವಳಿ ತಲಾಖ್ ನ್ನು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸುವ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎನ್ನಲಾಗಿದೆ.

ತ್ರಿವಳಿ ತಲಾಖ್ ಮಸೂದೆಯನ್ನು ಸಂಸತ್ ನ ಎರಡೂ ಸದನಗಳಲ್ಲಿ ಅಂಗೀಕರಿಸುವುದಕ್ಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆಗೆ ಒಪ್ಪಿಗೆ ನೀಡಿದೆ. ತ್ರಿವಳಿ ತಲಾಖ್ ನೀಡುವ ವ್ಯಕ್ತಿಗೆ 3 ವರ್ಷ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಲೋಕಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಅಂಗೀಕಾರಗೊಂಡಿದ್ದು, ಕರಡು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿರುವ ಅಂಶಗಳಿಗೆ ವಿರೋಧ ವ್ಯಕ್ತಪಡಿಸಿದ್ದ, ವಿರೋಧ ಪಕ್ಷಗಳು ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರಕ್ಕೆ ಅವಕಾಶ ನೀಡಿರಲಿಲ್ಲ.

RELATED ARTICLES  ಹಳದೀಪುರದಲ್ಲಿ ಭೀಕರ ಅಪಘಾತ : ಗಂಭೀರ ಗಾಯ

ಈ ಹಿನ್ನೆಲೆಯಲ್ಲಿ, ಮುಸ್ಲಿಂ ಮಹಿಳೆಯರ ವಿವಾಹ, ರಕ್ಷಣಾ ಮಸೂದೆಗೆ ಮೂರು ಪ್ರಮುಖ ತಿದ್ದುಪಡಿಗಳನ್ನು ಆಗಸ್ಟ್ ತಿಂಗಳಲ್ಲಿ ನೀಡಿತ್ತು. ಈ ತಿದ್ದುಪಡಿ ಪ್ರಕಾರ ತ್ರಿವಳಿ ತಲಾಖ್ ನೀಡುವುದು ಜಾಮೀನು ರಹಿತವಾದ ಅಪರಾಧವಾಗಲಿದ್ದು, ಮೂರು ವರ್ಷಗಳ ಶಿಕ್ಷೆ ವಿಧಿಸಲಾಗುತ್ತದೆ ಎಂದು ತಿಳಿದುಬಂದಿದೆ.

RELATED ARTICLES  ಕೆಆರ್‌ಎಸ್‌ ನೀರಿನ ಗುಣಮಟ್ಟ ಕುಸಿತ : ತಮಿಳುನಾಡಿಗೆ ನೀರು ಬಿಡುವ ಸಂಕಷ್ಟ ಸ್ಥಿತಿ ಎದುರು.