ಕುಮಟಾ: ಕರ್ನಾಟಕ ಸರಕಾರ,ಡಿ.ಎಸ್.ಇ.ಆರ್.ಟಿ.ಬೆಂಗಳೂರು, ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ, ಕುಮಟಾ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಉ.ಕ ಇವರ ಸಂಯುಕ್ತಾಶ್ರಯದಲ್ಲಿ ಕಾರವಾರ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಸ್ತುಪ್ರದರ್ಶನ ಕುಮಟಾ ಡಯಟನಲ್ಲಿ ನಡೆಯಿತು.

ವಿಜ್ಞಾನ ವಸ್ತುಪ್ರದರ್ಶನದಲ್ಲಿ ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ವಿದ್ಯಾರ್ಥಿಗಳಾದ ವೆಂಕಟೇಶ ಜೆ. ಪಟಗಾರ ಮತ್ತು ಸತೀಶ ಎಸ್. ಹಳ್ಳೇರ ಇವರು ‘ವ್ಯವಸಾಯ ಮತ್ತು ಸಾವಯವ ಕೃಷಿ’ ಎಂಬ ಉಪವಿಷಯದಲ್ಲಿ ಹಾಗೂ ಶಿವರಾಜ ಯೋಗೇಶ ನಾಯಕ ಮತ್ತು ದರ್ಶನ ಅಂಬಿಗ ಇವರು ‘ತ್ಯಾಜ್ಯ ನಿರ್ವಹಣೆ’ ಎಂಬ ಉಪವಿಷಯದಲ್ಲಿ ತಯಾರಿಸಿದ ಮಾದರಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎರಡೂ ಮಾದರಿಗಳು ರಾಜ್ಯ ಮಟ್ಟದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ಭಾಗವಹಿಸಲಿದೆ.
ಈ ಹಿಂದೆಯೂ ಅನೇಕ ಸಲ ಹೈಸ್ಕೂಲಿನ ವಿದ್ಯಾರ್ಥಿಗಳು ವಿಜ್ಞಾನ ಶಿಕ್ಷಕ ಮಹಾದೇವ ಬೊಮ್ಮು ಗೌಡ ಇವರ ಮಾರ್ಗದರ್ಶನ ಹಾಗೂ ಪರಿಶ್ರಮದಿಂದ ಮಕ್ಕಳ ವಿಜ್ಞಾನ ಸಮಾವೇಶ, ಪರಿಸರ ಮಿತ್ರ ಶಾಲಾ ಪ್ರಶಸ್ತಿ, ಇನ್‍ಸ್ಪಾಯರ್ಡ್ ಅವಾರ್ಡ, ಶಿಕ್ಷಕರ ಪಠ್ಯೇತರ ಚಟುವಟಿಕೆ ಸ್ಪರ್ಧೆ, ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯ ಮಟ್ಟ, ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದೆ. ಶಾಲೆಯ ಆಡಳಿತ ಮಂಡಳಿ, ಮುಖ್ಯಾಧ್ಯಾಪಕರು ಹಾಗೂ ಶಿಕ್ಷಕ ವೃಂದದವರ ಸಹಕಾರದಿಂದ ಹೈಸ್ಕೂಲಿನ ಕೀರ್ತಿ ಇನ್ನಷ್ಟು ಹೆಚ್ಚಿದೆ.

RELATED ARTICLES  ಅನಂತಮೂರ್ತಿ ಹೆಗಡೆಯವರ ಪಾದಯಾತ್ರೆಗೆ ಅಮೋಘ ಸ್ಪಂದನೆ : ಕುಮಟಾದಲ್ಲಿ ಭವ್ಯ ಸ್ವಾಗತ.

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶಕ ಶಿಕ್ಷಕರಿಗೆ ಮಹಾತ್ಮ ಗಾಂಧೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಹೊನ್ನಪ್ಪ. ಎನ್. ನಾಯಕ, ಕಾರ್ಯದರ್ಶಿ ಮೋಹನ. ಬಿ. ಕೆರೆಮನೆ, ಸದಸ್ಯರು, ಮುಖ್ಯಾಧ್ಯಾಪಕರು ರೋಹಿದಾಸ ಎಸ್ ಗಾಂವಕರ ಹಾಗೂ ಶಿಕ್ಷಕ ವೃಂದದವರು, ಬಿ.ಇಡಿ ಪ್ರಶಿಕ್ಷಣಾರ್ಥಿಗಳು, ಆಶ್ರಯ ಫೌಂಡೇಶನ್ ಅಧ್ಯಕ್ಷರಾದ ರಾಜೀವ ಗಾಂವಕರ, ಗ್ರಾಮ ಪಂಚಾಯತ ಅಧ್ಯಕ್ಷರಾದ ಸಣ್ಣಪ್ಪ ಮಾರುತಿ ನಾಯಕ, ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ನೀಲಕಂಠ ನಾಯಕ, ಬ್ರಹ್ಮ ಜಟಕ ಯುವಕ ಸಂಘದ ಅಧ್ಯಕ್ಷರಾದ ರಾಜು ಕೃಷ್ಣ ಗಾಂವಕರ ಮತ್ತು ಸದಸ್ಯರು , ಸ್ಪಂದನ ಫೌಂಡೇಶನ್‍ನ ಎನ್. ರಾಮು ಹೀರೆಗುತ್ತಿ, ಊರನಾಗರಿಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಡಿ.ಡಿ.ಪಿ.ಐ ಎನ್ ಜಿ ನಾಯಕ. ಉತ್ತರ ಕನ್ನಡ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ,ಕುಮಟಾ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಜೆ.ಮುಲ್ಲಾ ಕುಮಟಾ ಇವರು ಅಭಿನಂದನೆ ಸಲ್ಲಿಸಿ ಮುಂದಿನ ಹಂತಕ್ಕೆ ಶುಭಹಾರೈಸಿದರು.
ವರದಿ : ಎನ್ ರಾಮು ಹಿರೇಗುತ್ತಿ

RELATED ARTICLES  ಅರಬೈಲ್ ಘಟ್ಟದಲ್ಲಿ ಲಾರಿ ಪಲ್ಟಿ.