ಶಿರಸಿ:ತಾಲೂಕಿನ ಗಣೇಶನಗರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಂ.ಹೆಚ್. ನಾಯಕ ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಶಾಲೆಯ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಸೇರಿ ಉಪ ವಿಭಾಗೀಯ ಅಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ, ಎಸಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದ ಘಟನೆ ಶಿರಸಿಯಲ್ಲಿ ನಡೆದಿದೆ.

ಎಂ.ಹೆಚ್. ನಾಯಕ್ ಚೆನ್ನಾಗಿ ಪಾಠ ಮಾಡುತ್ತಿದ್ದು, ಹಲವಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಶಾಕಿರಣವಾಗಿದ್ದಾರೆ. ಪ್ರೌಢಶಾಲೆಯ ಫಲಿತಾಂಶ ವರ್ಷದಿಂದ ವರ್ಷಕ್ಕೆ ಉತ್ತಮವಾಗುತ್ತಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಶಿಕ್ಷಕರಿಗೆ ಶಿಕ್ಷೆಯ ರೂಪದಲ್ಲಿ ಖಡ್ಡಾಯ ವರ್ಗಾವಣೆಯನ್ನು ಮಾಡಬಾರದು ಎಂದು ಗ್ರಾಮಸ್ಥರು ಆಗ್ರಹಿಸಿದರು.

RELATED ARTICLES  ಅರಬೈಲ್ ಘಟ್ಟದಲ್ಲಿ ಲಾರಿ ಪಲ್ಟಿ.

ಅದೇ ರೀತಿ ಈ ಪ್ರೌಢಶಾಲೆ ಹುತ್ಗಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿದ್ದು, 2009ರಿಂದ ಬಿ ವಲಯದ ಗ್ರಾಮೀಣ ಪ್ರದೇಶದ ಶಾಲೆಯನ್ನು ಎ ವಲಯವನ್ನಾಗಿ ಬದಲಾಯಿಸಲಾಗಿದೆ. ಶಾಲೆಯ ಉತ್ತಮ ಫಲಿತಾಂಶವನ್ನು ನೋಡಿ ಇದನ್ನು ನಗರ ಪ್ರದೇಶಕ್ಕೆ ಸೇರಿಸಿಕೊಳ್ಳಲಾಗಿದೆ. ಮತ್ತೆ ಶಾಲೆಯನ್ನು ಬಿ ವಲಯವನ್ನಾಗಿ ಸರಿಪಡಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

RELATED ARTICLES  ಹಳ್ಳಿಯ ಉತ್ಪನ್ನಗಳನ್ನು ಮನೆ ಮನೆಗೆ ತಲುಪಿಸಲು ಸಿದ್ದವಾಗಿದೆ "ಫಾರ್ಮಿನ್"

ಹಿಂದುಳಿದ ಪ್ರದೇಶವಾಗ ಗಣೇಶ ನಗರದ ಶಾಲಾ ಮುಖ್ಯ ಶಿಕ್ಷಕರ ವರ್ಗಾವಣೆ ಹಾಗೂ ಶಾಲೆಯನ್ನು ಎ ವಲಯಕ್ಕೆ ಸೇರಿಸಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು ಅಧಿಕಾರಿಗಳ ಮುಂದಿನ ನಡೆಯನ್ನು ಕಾದು ನೋಡಬೇಕಾಗಿದೆ.