ಉತ್ತರ ಕನಡ ಜಿಲ್ಲೆಯ ಜೋಯಿಡಾ ಮತ್ತು ರಾಮನಗರ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ನದಿ ತೀರದ ಪ್ರದೇಶದ ವಿದ್ಯಾರ್ಥಿಗಳು ಶಾಲೆ ತೆರಳಲು ಹರಸಾಹಸ ಪಡುವಂತಾಗಿದೆ. ಅಲ್ಲಿನ ಪಾಂಡ್ರಿ ನದಿ ಉಕ್ಕಿ ಹರಿಯುತ್ತಿದ್ದು ಇಲ್ಲಿನ ಚಾಂದೆವಾಡಿ ಗ್ರಾಮದಲ್ಲಿನ ವಿದ್ಯಾರ್ಥಿಗಳು ಶಾಲೆ ಹೋಗಲು ಸಾಧ್ಯವಾಗುತ್ತಿಲ್ಲಾ ಸುತ್ತಲು ಜಲಾವ್ರತ್ತ ವಾಗಿರೋದ್ರಿಂದ ಹೊರಗಡೆ ಹೋಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹ ಬರುವ ಮೂನ್ಸೂಚನೆ ಕಾಣುತ್ತಿದ್ದು ಸಾರ್ವಜನಿಕರು ಆತಂಕಿತರಾಗಿದ್ದಾರೆ. ಶಾಲೆ ವಿದ್ಯಾರ್ಥಿಗಳಿಗೆ ಬೋಟ್ ಹಾಕಿ ಸುರಕ್ಷಿತವಾಗಿ ಕರೆತರುವ ಕಾರ್ಯ ನಡೆಸಲಾಗತ್ತಾ ಇದೆ.
ಇನ್ನೂ ಮುಂದಿನ 24 ಗಂಟೆ ಜಿಲ್ಲೆಯಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.