ನವದೆಹಲಿ : ಆಧಾರ್ ಸಿಂಧುತ್ವ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದ್ದು, ಆಧಾರ್ ಸಾಂವಿಧಾನಿಕ ಮಾನ್ಯತೆಯನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ಆಧಾರ್ ದಾಖಲಾತಿಗಾಗಿ ಕೇವಲ ಕನಿಷ್ಠ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.
ಆಧಾರ್ ಸಿಂಧುತ್ವ ಕುರಿತಂತೆ ಸುಪ್ರೀಂ ಕೋರ್ಟಿನಲ್ಲಿ ಇಂದು ಮಹತ್ವದ ತೀರ್ಪು ಇಂದು ಹೊರಬಿದ್ದಿದ್ದು, ಅಂತಿಮ ತೀರ್ಪಿನ ವಿವರವನ್ನು ನ್ಯಾಯಮೂರ್ತಿ ಎ ಕೆ ಸಿಕ್ರಿ ತಿಳಿದರು .

RELATED ARTICLES  ದ್ವಾದಶ ರಾಶಿಗಳಿಗೆ ಅನ್ವಯಿಸಿ ಇಂದಿನ ದಿನಾಂಕ 27/01/2019 ರ‌ ದಿನ ಭವಿಷ್ಯ ಇಲ್ಲಿದೆ.

ಆಧಾರ್ ದೇಶದ ಸಾಮಾನ್ಯ ನಾಗರಿಕರ ಗುರುತಾಗಿದೆ. ಆಧಾರ್ ಕಾರ್ಡ್ ಗೂ ಗುರುತಿಗೂ ವ್ಯತ್ಯಾಸವಿದೆ. ಬಯೋಮೆಟ್ರಿಕ್ ಮಾಹಿತಿಯನ್ನು ಒಂದು ಬಾರಿ ಸಂಗ್ರಹ ಮಾಡಿದರೆ ಅದು ವ್ಯವಸ್ಥೆಯಲ್ಲೇ ಉಳಿಯಲಿದೆ ಎಂದು ಸುಪ್ರೀಂ ಹೇಳಿದೆ.

RELATED ARTICLES  ಬುಲೆಟ್ ರೈಲು ಯೋಜನೆ ಮಿತ್ರ ರಾಷ್ಟ್ರ ಜಪಾನ್ ಭಾರತಕ್ಕೆ ನೀಡಿರುವ ಅಮೂಲ್ಯ ಉಡುಗೊರೆ

ಆಧಾರ್ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾದ 27 ಅರ್ಜಿಗಳ ವಿಚಾರಣೆ ಪೂರೈಸಿರುವ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಮಹತ್ವದ ತೀರ್ಪು ನೀಡಿದೆ ಎಂದು ವರದಿಯಾಗಿದೆ.