ಬೆಂಗಳೂರು : ಸೆಪ್ಟೆಂಬರ್ 29 ಹಾಗೂ 30 ರಂದು ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಉದ್ಯೋಗಮೇಳ ಏರ್ಪಡಿಸಲಾಗಿದೆ.
ಈ ಉದ್ಯೋಗಮೇಳಕ್ಕೆ ರಾಜ್ಯದ ವಿವಿಧ ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸುತ್ತಿವೆ.
ಮುಖ್ಯಮಂತ್ರಿಯವರ ಜನತಾದರ್ಶನದಲ್ಲಿ ಉದ್ಯೋಗಕ್ಕಾಗಿ ಮನವಿ ಸಲ್ಲಿಸಿದವರು, ಜನತಾದರ್ಶನ ಅರ್ಜಿಯ ಸ್ವೀಕೃತಿ, ಸ್ವವಿವರ ಮತ್ತು ಅಗತ್ಯ ದಾಖಲೆಗಳೊಂದಿಗೆ ಅಂದು ಹಾಜರಾಗಿ, ಈ ಸುವರ್ಣ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಲಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿ- ವಿವರಕ್ಕಾಗಿ ಸಹಾಯವಾಣಿ ಸಂಖ್ಯೆ 080-4455 4455 ನ್ನು ಸಂಪರ್ಕಿಸಬಹುದಾಗಿದೆ.