ನವದೆಹಲಿ: : ಕೇರಳ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡುವ ಮೂಲಕ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.
800 ವರ್ಷಗಳ ಪದ್ಧತಿ ತೆರೆ ಎಳೆಯಲಾಗಿದ್ದು,ದೇವಾಲಯಕ್ಕೆ 10-50 ವರ್ಷ ವಯೋಮಾನದ ಮಹಿಳೆಯರನ್ನು ನಿಷೇಧಿಸಿರುವುದು ಸಂವಿಧಾನದ ಮೂಲ ತತ್ವಗಳ ಉಲ್ಲಂಘನೆಯಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹೇಳಿದ್ದಾರೆ.
ಪ್ರಾರ್ಥನೆಗೆ ಯಾವುದೇ ತಾರತಮ್ಯ ಇರಬಾರದು. ದೈಹಿಕ ಆಧಾರದ ಮೇಲೆ ತಾರತಮ್ಯ ಮಾಡಬಾರದು. ಮಹಿಳೆಯರು ತಮ್ಮ ಹಕ್ಕಿಗಾಗಿ ಹೋರಾಡಿದ್ದಾರೆ. ಅವರನ್ನು ತಾರತಮ್ಯದಿಂದ ನೋಡಲಾಗುತ್ತಿದೆ. ಹಾಗಾಗಿ ಅವರಿಗೂ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಸುಪ್ರೀಂ ಐತಿಹಾಸಿಕ ತೀರ್ಪು ನೀಡಿದೆ.
ಭಾರತದಲ್ಲಿ ಮಹಿಳೆಯರಿಗೆ ದೇವತೆಯ ಸ್ಥಾನ ನೀಡಲಾಗಿದೆ. ಮಹಿಳೆಯರ ಕುರಿತು ಸಮಾಜದ ಗ್ರಹಿಕೆ ಬದಲಾಗಬೇಕು ಎಂದು ಹೇಳಿದ್ದು ಕೊನೆಗೆ ದೇವಸ್ತಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿದ್ದಾರೆ ಎಂದು ವರದಿಯಾಗಿದೆ.