ಅಂಕೋಲಾ :ಹದಿನೈದು ದಿನಗಳ ಕಾಲ ಕೆಎಲ್ಇ ಶಿಕ್ಷಣ ಮಹಾವಿದ್ಯಾಲಯ ಮತ್ತು ಎನ್ನೆಸ್ಸೆಸ್ ಘಟಕದ ಅಡಿಯಲ್ಲಿ ವಿಶ್ವವಿದ್ಯಾಲಯದ ಸೂಚನೆಯ ಮೇರೆಗೆ ಕೇಂದ್ರ ಸರ್ಕಾರದ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಸಂಪನ್ನವಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಣ ಮಹಾವಿದ್ಯಾಲಯದ ಎನ್ನೆಸ್ಸೆಸ್ ಸ್ವಯಂ ಸೇವಕರು ಭಾಗವಹಿಸಿ, ಅಂಕೋಲಾದ ಕೋಟೆ ಆಂಜನೇಯ ದೇವಸ್ಥಾನ ಆವರಣ ಮತ್ತು ಕೆಎಲ್ಈ ಆಸ್ಪತ್ರೆಯ ಸುತ್ತಮುತ್ತ ಸುತ್ತ ಮುತ್ತಲಿನ ಸ್ಥಳಗಳನ್ನು ಸ್ವಚ್ಛಗೊಳಿಸಿ,ಮನೆಗಳಿಗೆ ತೆರಳಿ ಸ್ವಚ್ಛತೆಯ ಅರಿವನ್ನು ಮೂಡಿಸಿದರು , ಸ್ವಚ್ಛತಾ ಜಾಥಾ ಮೂಲಕ ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕೆಂಬ ಸಂದೇಶವನ್ನು ನೀಡಲಾಯಿತು .
ಈ ಒಂದು ಹಂತದಲ್ಲಿ ಗಾಂಧಿ ಜಯಂತಿ ಮತ್ತು ಎನ್ನೆಸ್ಸೆಸ್ ದಿನಾಚರಣೆಯನ್ನು ಸಹಿತ ಆಚರಿಸಲಾಯಿತು
ಈ ಸಂದರ್ಭದಲ್ಲಿ ಕೆಎಲ್ಇ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ವಿನಾಯಕ ಹೆಗಡೆ ಮತ್ತು ಎನ್ನೆಸ್ಸೆಸ್ ಕಾರ್ಯಾಧಿಕಾರಿಗಳಾದ ರಾಘವೇಂದ್ರ ಅಂಕೋಲೆಕರ್ ಹಾಗೂ ಇತರ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು