ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಕಾರಣ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿಗಳಲ್ಲಿ,ನಾನಾ ಜಿಲ್ಲೆಗಳಲ್ಲಿ ಮುಂದಿನ ವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಕ್ಟೋಬರ್ 5 ರ ನಂತರ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕೇರಳ ಮತ್ತು ಕರ್ನಾಟಕದಲ್ಲಿ ಸೈಕ್ಲೋನ್ ಉಂಟಾಗುವ ಸಾಧ್ಯತೆಯಿದೆ ಎಂದು ಬೆಂಗಳೂರು ಐಎಂಡಿ ನಿರ್ದೇಶಕ ಸಿ,ಎಸ್ ಪಾಟೀಲ್ ತಿಳಿಸಿದ್ದಾರೆ.
ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಹಾಗೂ ಕರಾವಳಿ ಹೆಚ್ಚಿನ ಮಳೆಯಾಗಲಿದ್ದು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.