ಬೆಂಗಳೂರು: ಶುಕ್ರವಾರ ಬೆಳಗ್ಗೆ ಕರ್ನಾಟಕ ಕೈಗಾರಿಕಾ ಪ್ರಾದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಮುಖ್ಯ ಅಭಿವೃದ್ಧಿ ಅಧಿಕಾರಿ ಟಿ.ಆರ್. ಸ್ವಾಮಿ ಮತ್ತು ಬಿಡಿಎ ಎಂಜಿನಿಯರ್ ಗೌಡಯ್ಯ ಅವರ ಮನೆ ಹಾಗೂ ಕಚೇರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಇಬ್ಬರು ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ, ಮಾತ್ರವಲ್ಲದೆ ಅಪಾರ ಪ್ರಮಾಣದ ಹಣ ಮತ್ತು
ದಾಖಲೆಗಳನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮಲ್ಲೇಶ್ವರಂನಲ್ಲಿರುವ ಬಹಮಹಡಿ ಅಪಾರ್ಟ್ಮೆಂಟ್ನಲ್ಲಿರುವ ಕೆಐಎಡಿಬಿ ಮುಖ್ಯ ಇಂಜಿನಿಯರ್ ಟಿ.ಆರ್.ಸ್ವಾಮಿ ಅವರನ್ನು ಗುರಿಯಾಗಿರಿಸಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ.
ಅಧಿಕಾರಿಗಳು ಟಿ.ಆರ್.ಸ್ವಾಮಿ ಅವರ 14 ನೇ ಮಹಡಿಯಲ್ಲಿರುವ ನಿವಾಸಕ್ಕೆ ಬಾಗಿಲು ಒಡೆದು ಪ್ರವೇಶ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೇ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ ಎನ್ನಲಾಗಿದ್ದು, 2 ಕಾರುಗಳಲ್ಲಿ ಅಪಾರ ದಾಖಲೆಗಳು ಸಿಕ್ಕಿರುವ ಬಗ್ಗೆ ತಿಳಿದು ಬಂದಿದೆ.

RELATED ARTICLES  ನಿಮ್ಮ ರಾಶಿಯ ಪ್ರಕಾರ ನಿಮ್ಮ ಇಂದಿನ ದಿನ ಹೇಗಿರಲಿದೆ ಗೊತ್ತಾ? ದಿನಾಂಕ 17-10-2018ರ ರಾಶಿ ಭವಿಷ್ಯ ಇಲ್ಲಿದೆ.